ನವದೆಹಲಿ, ನ.14 (DaijiworldNews/PY): ಈ ಬಾರಿ ಪ್ರಧಾನಿ ಮೋದಿ ಅವರು ರಾಜಸ್ಥಾನದ ಜೈಸಾಲ್ಮೇರ್ನ ಲೋಂಗೆವಾಲದಲ್ಲಿ ಯೋಧರ ಜೊತೆ ದೀಪಾವಳಿ ಹಬ್ಬವನ್ನು ಆಚರಿಸಲಿದ್ದಾರೆ.
ಪ್ರಧಾನಿ ಮೋದಿ ಅವರೊಂದಿಗೆ ಸೇನಾಪಡೆಗಳ ಮುಖ್ಯಸ್ಥ ಜನರಲ್ ಬಿಪಿನ್ ರಾವತ್ ಅವರು ಸೇರಿದಂತೆ ಬಿಎಸ್ಎಫ್ ಮಹಾ ನಿರ್ದೇಶಕ ರಾಕೇಶ್ ಅಸ್ತಾನಾ ಹಾಗೂ ಸೇನಾ ಮುಖ್ಯಸ್ಥ ಎಂ.ಎಂ.ನರವಣೆ ಅವರು ಇರಲಿದ್ದಾರೆ ಎಂದು ಸುದ್ದಿ ಸಂಸ್ಥೆಯೊಂದು ಟ್ವೀಟ್ ಮಾಡಿದೆ.
ಶುಕ್ರವಾರದಂದು ಟ್ವೀಟ್ ಮಾಡಿದ್ದ ಪ್ರಧಾನಿ ಮೋದಿ ಅವರು, "ಈ ಬಾರಿಯ ದೀಪಾವಳಿ ಹಬ್ಬದ ಸಂದರ್ಭ ದೇಶದ ಗಡಿ ಕಾಯುತ್ತಿರುವ ಯೋಧರಿಗೆ ಸೆಲ್ಯೂಟ್ ಹೊಡೆಯಲು ದೀಪ ಬೆಳಗಿಸಿ" ಎಂದು ತಿಳಿಸಿದ್ದಾರೆ.