ಮಧುರೈ,ನ.14 (DaijiworldNews/HR): ಮಧುರೈನ ನವಬತ್ಕಾನಾ ಪ್ರದೇಶದಲ್ಲಿರುವ ಬಟ್ಟೆಯಂಗಡಿಯಲ್ಲಿ ಬೆಂಕಿ ಅವಘಡ ಸಂಭಂವಿಸಿದ್ದು, ಈ ವೇಳೆ ಇಬ್ಬರು ಅಗ್ನಿ ಶಾಮಕ ದಳದ ಸಿಬ್ಬಂದಿಗಳು ಸಾವಿಗೀಡಾಗಿದ್ದಾರೆ.
ಸಾಂಧರ್ಭಿಕ ಚಿತ್ರ
ಬಟ್ಟೆಯಂಗಡಿಯಲ್ಲಿ ಬೆಂಕಿ ಕಾಣಿಸಿಕೊಂಡ ಹಿನ್ನಲೆಯಲ್ಲಿ ಕೂಡಲೇ ಅಗ್ನಿಶಾಮಕ ದಳಕ್ಕೆ ಮಾಹಿತಿ ನೀಡಲಾಗಿ, ಸಿಬ್ಬಂದಿ ಸ್ಥಳಕ್ಕಾಗಮಿಸಿ ಬೆಂಕಿ ನಂದಿಸುವ ಕಾರ್ಯದಲ್ಲಿ ತೊಡಗಿದ್ದರು, ಈ ವೇಳೆ ಇಬ್ಬರು ಅಗ್ನಿ ಶಾಮಕ ಸಿಬ್ಬಂದಿಗಳು ಮೃತಪಟ್ಟಿದ್ದಾರೆ.
ಬೆಂಕಿ ನಂದಿಸುತ್ತಿದ್ದಾಗ ಏಕಾಏಕಿ ಕಟ್ಟಡ ಕುಸಿತ ಸಂಭವಿಸಿ ಅದರೊಳಗೆ ಸಿಲುಕಿದ್ದ ಇಬ್ಬರು ಅಗ್ನಿ ಶಾಮಕ ಸಿಬ್ಬಂದಿ ಮೃತಪಟ್ಟಿದ್ದಾರೆಂದು ತಿಳಿದು ಬಂದಿದೆ.
ಇನ್ನು ಸತತ ಕಾರ್ಯಾಚರಣೆಯ ಬಳಿಕ ಬಟ್ಟೆಯಂಗಡಿಯ ಬೆಂಕಿ ನಂದಿಸಲಾಗಿದೆ ಎಂದು ವರದಿಯಾಗಿದೆ.