ಚಿತ್ರದುರ್ಗ,ನ.14 (DaijiworldNews/HR): ಹಿರಿಯೂರು ತಾಲ್ಲೂಕಿನ ಪಟ್ರೇಹಳ್ಳಿ ಬಳಿ ಗ್ರೀನ್ ಲ್ಯಾಂಡ್ ಹೋಟೆಲ್ ಸಮೀಪದ ರಾಷ್ಟ್ರೀಯ ಹೆದ್ದಾರಿಯಲ್ಲಿ ಬಸ್, ಕಾರು ಹಾಗು ಕ್ಯಾಂಟರ್ ನಡುವೆ ಸರಣಿ ಅಪಘಾತ ಸಂಭವಿಸಿದ್ದು , ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ.
ಸಾವನ್ನಪ್ಪಿದವರನ್ನು ಓಮಿನಿ ಕಾರಿನಲ್ಲಿದ್ದ ಹಾವೇರಿ ಮೂಲದ ಲತಾ (28) ಮತ್ತು ಬೆಂಗಳೂರಿನ ಅತ್ತಿಬೆಲೆ ನಿವಾಸಿ ಟಾಟಾ ಏಸ್ ಚಾಲಕ ಶಶಿಕುಮಾರ್ (26) ಎಂದು ಗುರುತಿಸಲಾಗಿದೆ.
ಇನ್ನು ಗಂಭೀರ ಗಾಯಗೊಂಡಿರುವ ಶೃತಿ (03), ಜ್ಯೋತಿ (25), ಜಾಗೃತಿ (04), ದ್ಯಾಮಣ್ಣ (24)ಅವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಖಾಸಗಿ ಬಸ್ ಚಾಲಕನ ಅಜಾಗರೂಕತೆಯೇ ಸರಣಿ ಅಪಘಾತಕ್ಕೆ ಕಾರಣ ಎನ್ನಲಾಗುತ್ತಿದ್ದು, ಹಿರಿಯೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.