ಕುಶಾಲನಗರ, ನ.14 (DaijiworldNews/HR): ಇಬ್ಬರು ಗಂಡು ಮಕ್ಕಳು ಹಾಗೂ ಒಂದು ಹೆಣ್ಣು ಮಗುವಿನ ಮೃತದೇಹ ಕುಶಾಲನಗರ ಸಮೀಪದ ತೊರೆನೂರು ಬಳಿಯ ಹಾರಂಗಿ ಎಡದಂಡೆ ನಾಲೆಯಲ್ಲಿ ತೇಲಿಬರುತ್ತಿರುವುದನ್ನು ಸ್ಥಳೀಯರು ಗಮನಿಸಿದ್ದು ಮೇಲಕೆತ್ತಿದ್ದಾರೆ.
ಮಕ್ಕಳೊಂದಿಗೆ ತಾಯಿ ನೀರಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆಯೇ ಅಥವಾ ಮಕ್ಕಳೇ ಆಟವಾಡಲು ಹೋಗಿ ಕಾಲು ಜಾರಿ ನಾಲೆಗೆ ಬಿದ್ದಿದ್ದಾರೆಯೇ ಎಂದು ಖಚಿತ ಮಾಹಿತಿ ಲಭ್ಯವಾಗಿಲ್ಲ.
ಇನ್ನು ಹಾರಂಗಿ ಜಲಾಶಯಕ್ಕೆ ನೀರು ಹರಿಸುವುದನ್ನು ನಿಲ್ಲಿಸಿ, ಶೋಧ ನಡೆಸಲಾಗುತ್ತಿದೆ. ಮಕ್ಕಳು ಎಲ್ಲಿಯವರು ಎಂಬುದು ಪತ್ತೆಯಾಗಿಲ್ಲ ಎಂದು ತಿಳಿದು ಬಂದಿದೆ.