ಬುಲಂದ್ಶಹರ್, ನ.14 (DaijiworldNews/HR): ಬಿಜೆಪಿಯ ಹಿರಿಯ ನಾಯಕ ಹೊರಮ್ ಸಿಂಗ್ ಅವರ ಪುತ್ರ ಮಹೇಶ್ ಎಂಬವರು ಶೂಟ್ ಮಾಡಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ.
ಮಹೇಶ್ ತಮ್ಮ ಮನೆಯಲ್ಲಿಯೇ ಶೂಟ್ ಮಾಡಿಕೊಂಡಿದ್ದು,ಶವವಾಗಿ ಪತ್ತೆಯಾಗಿರುವುದಾಗಿ ಅವರ ಕುಟುಂಬಸ್ಥರು ತಿಳಿಸಿದ್ದಾರೆ.
ಈ ಘಟನೆಯ ಕುರಿತು ಮಾಹಿತಿ ತಿಳಿದು ಪೊಲೀಸರು ಸ್ಥಳಕ್ಕೆ ಆಗಮಿಸಿದ್ದು, ಶವವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದಾರೆ ಎಂದು ತಿಳಿದು ಬಂದಿದೆ.
ಇನ್ನು ಪ್ರಾಥಮಿಕ ತನಿಖೆಯಲ್ಲಿ ಇದು ಆತ್ಮಹತ್ಯೆ ಎಂದು ತೋರುತ್ತಿದ್ದು, ಈ ಕುರಿತು ತನಿಖೆ ನಡೆಸಲಾಗುತ್ತಿದೆ ಎಂದು ಇನ್ಸ್ಪೆಕ್ಟರ್ ಕೊಟ್ವಾಲಿ ಎಂ.ಕೆ. ಉಪಾಧ್ಯಾಯ ತಿಳಿಸಿದ್ದಾರೆ.