ಜೈಪುರ, ನ.15 (DaijiworldNews/HR): ಕೊರೊನಾ ಕಾರಣದಿಂದಾಗಿ ಈ ಬಾರಿಯ ದೀಪಾವಳಿಗೆ ಪಟಾಕಿ ನಿಷೇಧಿಸಿದ್ದು, ನಿಯಮಗಳನ್ನು ಉಲ್ಲಂಘಿಸಿ ಪಟಾಕಿಗಳ ಮಾರಾಟ ಮತ್ತು ಸಿಶಿಸುವುದು ಕಂಡುಬಂದಲ್ಲಿ ದಂಡ ವಿಧಿಸಲಾಗುವುದು ಎಂದು ರಾಜಸ್ಥಾನ ಸರ್ಕಾರ ಆದೇಶ ಹೊರಡಿಸಿದೆ.
ಅಂಗಡಿಗಳಲ್ಲಿ ಪಟಾಕ ಮಾರುವುದು ಪತ್ತೆಯಾದಲ್ಲಿ ಮಾಲೀಕರಿಗೆ 10 ಸಾವಿರ ರೂ. ದಂಡ ಹಾಗೂ ಪಟಾಕಿ ಸಿಡಿಸುವುವವರಿಗೆ 2 ಸಾವಿರ ರೂ. ದಂಡ ವಿಧಿಸಲಾಗುವುದು ಎಂದು ರಾಜಸ್ಥಾನ ಸರ್ಕಾರ ತಿಳಿಸಿದೆ.
ಇನ್ನು ಕೊರೊನಾ ಮತ್ತು ಮಾಲಿನ್ಯ ಕಡಿಮೆ ಮಾಡುವ ಉದ್ದೇಶದಿಂದ ರಾಜಸ್ಥಾನ, ಮಹಾರಾಷ್ಟ್ರ, ಪಶ್ಚಿಮ ಬಂಗಾಳ, ದೆಹಲಿ, ಚಂಡೀಗಢ, ಒಡಿಶಾ ಮತ್ತು ಸಿಕ್ಕಿಂ ರಾಜ್ಯಗಳಲ್ಲಿ ಈ ಬಾರಿ ದೀಪಾವಳಿಯಂದು ಪಟಾಕಿ ಬಳಕೆಯನ್ನು ಸಂಪೂರ್ಣವಾಗಿ ನಿಷೇಧಿಸಿವೆ.