ಶ್ರೀನಗರ, ನ.15 (DaijiworldNews/HR): ಜಮ್ಮು-ಕಾಶ್ಮೀರ ಮಾಜಿ ಉಪಮುಖ್ಯಮಂತ್ರಿ ಮುಜಾಫರ್ ಹುಸೇನ್ ಬೇಗ್ ಅವರು ಜಮ್ಮು-ಕಾಶ್ಮೀರದಲ್ಲಿ ಜಿಲ್ಲಾ ಅಭಿವೃದ್ಧಿ ಪರಿಷತ್ (ಡಿಡಿಸಿ) ಚುನಾವಣೆಗೆ ನ್ಯಾಷನಲ್ ಕಾನ್ಫರೆನ್ಸ್ ಹಾಗೂ ಪಿಡಿಪಿ ಮೈತ್ರಿ ಮಾಡಿಕೊಂಡು, ಸ್ಥಾನ ಹಂಚಿಕೆ ಸಂಬಂಧ ಬೇಸರಗೊಂಡು ಪಿಡಿಪಿ ಪಕ್ಷ ತೊರೆದಿದ್ದಾರೆ.
ಈ ಕುರಿತು ಮಾತನಾಡಿರುವ ಮುಜಾಫರ್ ಹುಸೇನ್ ಬೇಗ್, "ನ್ಯಾಷನಲ್ ಕಾನ್ಫರೆನ್ಸ್ ಹಾಗೂ ಪಿಡಿಪಿ ಮೈತ್ರಿಯಲ್ಲಿ ನ್ಯಾಷನಲ್ ಕಾನ್ಫರೆನ್ಸ್ ಅತಿ ಹೆಚ್ಚು ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ. ಇದು ಪಿಡಿಪಿ ಹಿತಾಸಕ್ತಿಗೆ ವಿರುದ್ಧವಾಗಿದೆ, ಆದ್ದರಿಂದ ಪಕ್ಷ ತೊರೆಯುತ್ತಿದ್ದು, ಈ ಬಗ್ಗೆ ಪಿಡಿಪಿ ಅಧ್ಯಕ್ಷೆ ಮೆಹಬೂಬಾ ಮುಫ್ತಿ ಅವರೊಂದಿಗೂ ಮಾತನಾಡಿದ್ದೇನೆ ಎಂದು ತಿಳಿಸಿದ್ದಾರೆ.
ಇನ್ನು ಮುಜಾಫರ್ ಹುಸೇನ್ ಬೇಗ್ ಅವರು ಮುಂದಕ್ಕೆ ಯಾವ ಪಕ್ಷಕ್ಕೆ ಸೇರಲಿರುವ ಬಗ್ಗೆ ಮಾಹಿತಿ ನೀಡಿಲ್ಲ.