ನವದೆಹಲಿ, ನ.15 (DaijiworldNews/HR): ದೆಹಲಿಯಲ್ಲಿ ದೀಪಾವಳಿಯಂದು ಪಟಾಕಿ ನಿಷೇಧಿಸಿದ್ದರು ಕೂಡ ಜನರು ಪಟಾಕಿ ಹೊಡೆಯುವ ಮೂಲಕವೇ ಶಬ್ಧಾಡಂಬರದ ದೀಪಾವಳಿ ಆಚರಣೆಗೆ ಮಾಡಿದ್ದಾರೆ.
ಸಾಂಧರ್ಭಿಕ ಚಿತ್ರ
ಪಟಾಕಿಯ ಅಬ್ಬರ ಶನಿವಾರ ಮಧ್ಯರಾತ್ರಿ ಕಳೆದರೂ ಮುಗಿಯದ ಕಾರಣ ರಾಷ್ಟ್ರ ರಾಜಧಾನಿ ವಲಯಯ ಗಾಳಿಯ ಗುಣಮಟ್ಟವು ತೀವ್ರ ಸ್ವರೂಪದಲ್ಲಿ ಹದಗೆಟ್ಟಿದ್ದು, ಇಲ್ಲಿನ ಐಟಿಒ ಮತ್ತು ಆನಂದ ವಿಹಾರ ಪ್ರದೇಶಗಳಲ್ಲಿ ಗಾಳಿಯ ಗುಣಮಟ್ಟ ಸೂಚ್ಯಂಕವು ಕ್ರಮವಾಗಿ 461 ಮತ್ತು 478ರಷ್ಟು ದಾಖಲಾಗಿದೆ ಎಂದು ದೆಹಲಿ ಮಾಲಿನ್ಯ ನಿಯಂತ್ರಣ ಸಮಿತಿ ತಿಳಿಸಿದೆ.
ಇನ್ನು ಇಂದು ಕೂಡ ಪಟಾಕಿ ಸಿಡಿಸಿದಲ್ಲಿ ಮಾಲಿನ್ಯ ಪ್ರಮಾಣ ಮತ್ತಷ್ಟು ಹೆಚ್ಚಲಿದ್ದು, ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸಲಿದೆ ಎಂದು ಸಮಿತಿ ಎಚ್ಚರಿಕೆ ನೀಡಿದೆ.
ನ.9ರಂದು ದೆಹಲಿ, ನೊಯ್ಡಾ, ಗ್ರೇಟರ್ ನೊಯ್ಡಾ, ಗುರುಗ್ರಾಂ, ಗಾಜಿಯಾಬಾದ್ನಲ್ಲಿ ನ. 30ರವರೆಗೆ ಪಟಾಕಿ ಮಾರಾಟ ಮತ್ತು ಬಳಕೆಯನ್ನು ಸಂಪೂರ್ಣ ನಿಷೇಧಿಸಿ ರಾಷ್ಟ್ರೀಯ ಹಸಿರು ನ್ಯಾಯಮಂಡಳಿ ಆದೇಶ ಹೊರಡಿಸಿತ್ತು.