ಕೋಲ್ಕತಾ, ನ.15 (DaijiworldNews/HR): ಖ್ಯಾತ ಬಂಗಾಳಿ ನಟ ಸೌಮಿತ್ರಾ ಚಟರ್ಜಿ(85) ಕಳೆದ ಒಂದು ತಿಂಗಳಿನಿಂದ ಅನಾರೋಗ್ಯಕ್ಕೀಡಾಗಿ ಆಸ್ಪತ್ರೆಗೆ ದಾಖಲಾಗಿದ್ದು, ಇದೀಗ ಚಿಕಿತ್ಸೆ ಫಲಕಾರಿಯಾಗದೆ ಇಂದು ಮೃತಪಟ್ಟಿದ್ದಾರೆ.
ಸೌಮಿತ್ರ ಚಟರ್ಜಿಯವರು ಚಿಕಿತ್ಸೆಗೆ ಸ್ಪಂದಿಸುತ್ತಿಲ್ಲ ಜೊತೆಗೆ ಒಂದಕ್ಕಿಂತ ಹೆಚ್ಚು ಲೈಫ್ ಸಪೋರ್ಟ್ ಯಂತ್ರಗಳನ್ನು ಅಳವಡಿಸಲಾಗಿದ್ದು, ಕಳೆದ 24 ಗಂಟೆಗಳಲ್ಲಿ ಅವರ ಆರೋಗ್ಯ ಸ್ಥಿತಿ ಅತ್ಯಂತ ಗಂಭೀರವಾಗಿದೆ. ನಾವು ಏನೂ ಹೇಳಲು ಸಾಧ್ಯವಿಲ್ಲ ಎಂದು ನಿನ್ನೆ ವೈದ್ಯರು ತಿಳಿಸಿದ್ದರು. ಇದೀಗ ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಕೊನೆಯುಸೆರೆಳೆದಿದ್ದಾರೆ.
ಇನ್ನು ಕ್ಯಾನ್ಸರ್ ನಿಂದ ಬಳಲುತ್ತಿರುವ ಸೌಮಿತ್ರ ಚಟರ್ಜಿ ಅವರಿಗೆ ಇತ್ತೀಚೆಗೆ ಕೊರೊನಾ ಸೋಂಕು ದೃಢಪಟ್ಟಿತ್ತು.