ನವದೆಹಲಿ, ನ. 15 (DaijiworldNews/MB) : ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ಕೊರೊನಾ ಸೋಂಕು ಪ್ರಕರಣಗಳು ಅಧಿಕವಾಗುತ್ತಲ್ಲೇ ಇದ್ದು ಈ ಹಿನ್ನೆಲೆಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಭಾನುವಾರ ಸಂಜೆ ಸಭೆ ಕರೆದಿದ್ದಾರೆ ಎಂದು ವರದಿಯಾಗಿದೆ.
ದೆಹಲಿಯ ಉತ್ತರ ಬ್ಲಾಕ್ನಲ್ಲಿ ಈ ಸಭೆಯು ನಡೆಯಲಿದ್ದು ಈ ಸಭೆಯಲ್ಲಿ ಕೇಂದ್ರ ಆರೋಗ್ಯ ಸಚಿವ ಡಾ.ಹರ್ಷವರ್ಧನ್, ದೆಹಲಿ ಲೆಫ್ಟಿನೆಂಟ್ ಗವರ್ನರ್ ಅನಿಲ್ ಬೈಜಾಲ್, ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಸೇರಿದಂತೆ ಹಲವು ಉನ್ನತಾಧಿಕಾರಿಗಳು ಭಾಗುಯಾಗಲಿದ್ದಾರೆ ಎಂದು ವರದಿ ತಿಳಿಸಿದೆ. ಇನ್ನು ಕೊರೊನಾ ಸೋಂಕಿನ ನಡುವೆಯೂ ದೆಹಲಿಯಲ್ಲಿ ದೀಪಾವಳಿಯ ಹಬ್ಬದ ಸಂದರ್ಭದಲ್ಲಿ ಪಟಾಕಿ ನಿಷೇಧವಿದ್ದರೂ ಪಟಾಕಿ ಹಲವರು ಪಟಾಕಿ ಸಿಡಿಸಿದ್ದು ವಾಯು ಗುಣಮುಟ್ಟ ತೀರಾ ಹದಗೆಟ್ಟಿದೆ ಎಂದು ಹೇಳಲಾಗಿದೆ. ಈ ವಿಚಾರದ ಬಗ್ಗೆಯೂ ಸಭೆಯಲ್ಲಿ ಚರ್ಚೆ ನಡೆಯುವ ಸಾಧ್ಯತೆಯಿದೆ. ಕೊರೊನಾ ನಿರ್ವಹಣೆಯ ವಿಚಾರದಲ್ಲಿ ಅಮಿತ್ ಶಾ ಅವರು ಇದು ಎರಡನೇ ಬಾರಿಗೆ ಮಧ್ಯಪ್ರವೇಶ ಮಾಡಿದ್ದಾರೆ.
ದೆಹಲಿಯಲ್ಲಿ ಒಟ್ಟು 482170 ಕೊರೊನಾ ಪ್ರಕರಣಗಳು ದಾಖಲಾಗಿದ್ದು ಈ ಪೈಕಿ 430195 ಸೋಂಕಿತರು ಗುಣಮುಖರಾಗಿದ್ದಾರೆ. ಪ್ರತಿದಿನ ಸುಮಾರು 7 ಸಾವಿರಕ್ಕೂ ಅಧಿಕ ಕೊರೊನಾ ಪ್ರಕರಣಗಳು ದಾಖಲಾಗುತ್ತಿದೆ ಎಂದು ವರದಿ ತಿಳಿಸಿದೆ. ಹಾಗೆಯೇ ಈವರೆಗೂ 7519 ಮಂದಿ ಸೋಂಕಿತರು ಸಾವನ್ನಪ್ಪಿದ್ದಾರೆ.