ಮಿಜೋರಾಂ, ನ. 15 (DaijiworldNews/MB) : ಮಣಿಪುರ ಮುಖ್ಯಮಂತ್ರಿ ಎನ್. ಬಿರೇನ್ ಸಿಂಗ್ ಅವರಿಗೆ ಕೊರೊನಾ ಸೋಂಕು ದೃಢಪಟ್ಟಿದೆ.
ಈ ಬಗ್ಗೆ ಸ್ವತಃ ಅವರೇ ಟ್ವೀಟ್ ಮಾಡಿ ತಿಳಿಸಿದ್ದಾರೆ. ''ನನಗೆ ಕೊರೊನಾ ಪಾಸಿಟಿವ್ ಎಂದು ತಿಳಿದು ಬಂದಿದೆ. ಇತ್ತೀಚೆಗೆ ನನ್ನೊಂದಿಗೆ ನಿಕಟ ಸಂಪರ್ಕಕ್ಕೆ ಬಂದ ಎಲ್ಲರೂ ಸ್ವಯಂ ಐಸೊಲೇಶನ್ಗೆ ಒಳಗಾಗುವಂತೆ ನಾನು ವಿನಂತಿಸುತ್ತೇನೆ'' ಎಂದು ತಿಳಿಸಿದ್ದಾರೆ.
ಮಣಿಪುರದಲ್ಲಿ ಈವರೆಗೆ 21,636 ಜನರಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು ಈ ಪೈಕಿ 18,334 ಸೋಂಕಿತರು ಗುಣಮುಖರಾಗಿದ್ದಾರೆ. ಈವರೆಗೆ 218 ಮಂದಿ ಸೋಂಕಿತರು ಸಾವನ್ನಪ್ಪಿದ್ದಾರೆ.