ಬೆಂಗಳೂರು, ನ. 15 (DaijiworldNews/MB) : ಈಶಾನ್ಯ ಮುಂಗಾರು ರಾಜ್ಯದಲ್ಲಿ ಚುರುಕುಗೊಂಡಿದ್ದು ಅನೇಕ ಕಡೆ ಅಸಾಧಾರಣ ಮಳೆಯಾಗುವ ಸಾಧ್ಯತೆಗಳಿವೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ವಾತಾವರಣದಲ್ಲಿ ಉಂಟಾಗುತ್ತಿರುವ ಬದಲಾವಣೆಯಿಂದಾಗಿ ಕೋಲಾರ, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ರಾಮನಗರ, ಮಂಡ್ಯ, ಚಾಮರಾಜನಗರ ಸೇರಿದಂತೆ ರಾಜ್ಯದ ದಕ್ಷಿಣ ಒಳನಾಡಿನ ಹಾಗೂ ಪೂರ್ವ ಭಾಗದ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಗಳಿವೆ. ಹಾಗೆಯೇ ಹಲವೆಡೆ ಮೋಡ ಕವಿದ ವಾತಾವರಣ ಇರಲಿದೆ.
ಕೆಲವೆಡೆ ಗಾಳಿ ಇರಲಿದ್ದು ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಆದರೆ ಭಾರೀ ಮಳೆಯಾಗುವ ಮುನ್ಸೂಚನೆ ಈವರೆಗೂ ಕಂಡು ಬಂದಿಲ್ಲ ಎಂದು ತಿಳಿಸಿದೆ.