ಶಿರಡಿ,ನ. 16 (DaijiworldNews/HR): ಕೊರೊನಾ ಕಾರಣದಿಂದ ಕೆಲವು ತಿಂಗಳಿಂದ ಮುಚ್ಚಿದ್ದ ಶಿರಡಿಯ ಸಾಯಿಬಾಬಾ ದೇವಸ್ಥಾನವನ್ನು ಇಂದಿನಿಂದ ಮತ್ತೆ ತೆರೆಯಲಾಗಿದೆ.
ಕೊರೊನಾ ಮುಂಜಾಗ್ರದ ಕ್ರಮಗಳಾದ ಮಾಸ್ಕ್ ಧರಿಸುವುದು, ಸ್ಯಾನಿಟೈಸರ್ ಬಳಕೆ, ಪರಸ್ಪರ ಅಂತರ ಕಾಯ್ದುಕೊಳ್ಳುವುದು ಪಾಲಿಸಲಾಗಿದೆ.
ಇನ್ನು ಇಂದಿನಿಂದ ಮಹಾರಾಷ್ಟ್ರದಲ್ಲಿ ದೇವಸ್ಥಾನಗಳನ್ನು ಸಾರ್ವಜನಿಕರ ಭೇಟಿಗೆ ಮುಕ್ತಗೊಳಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ.