ಬೆಂಗಳೂರು, ನ. 16 (DaijiworldNews/HR): ಬಸವೇಶ್ವರನಗರದ ಕಾಳಪ್ಪ ಎಂಬಾತ ತನ್ನ ಪತ್ನಿ ಸುಮಿತ್ರಾ ಎಂಬುವರನ್ನು ಇಂದು ಬೆಳಿಗ್ಗೆ ಗುಂಡಿಕ್ಕಿ ಹತ್ಯೆ ಮಾಡಿದ್ದು, ಬಳಿಕ ತಾನೂ ಆತ್ಮಹತ್ಯೆಗೆ ಯತ್ನಿಸಿದ ಘಟನೆ ನಡೆದಿದೆ.
ಕೆಲವು ವರ್ಷಗಳ ಹಿಂದೆ ಸುಮಿತ್ರಾ ಹಾಗೂ ಕಾಳಪ್ಪ ಮದುವೆಯಾಗಿದ್ದು, ಇವರಿಬ್ಬರ ನಡುವೆ ಜಗಳ ನಡೆಯುತ್ತಲೇ ಇತ್ತು. ಇಂದು ವಿಪರಿತ ಜಗಳ ನಡೆದು ಕಾಳಪ್ಪ ತನ್ನ ಬಳಿಯಿದ್ದ ಪಿಸ್ತೂಲ್ನಿಂದ ಪತ್ನಿ ಸುಮಿತ್ರಾ ಮೇಲೆ ಗುಂಡು ಹಾರಿಸಿದ್ದು, ಆಕೆ ಸ್ಥಳದಲ್ಲೇ ಸಾವನ್ನಪ್ಪಿದ್ದಾಳೆ.
ಇನ್ನು ಪತ್ನಿಯನ್ನು ಹತ್ಯೆಗೈದ ಬಳಿಕ ತಾನೂ ಕೂಡ ಆತ್ಮಹತ್ಯೆಗೆ ಯತ್ನಿಸಿದ್ದಾನೆ. ಆತನನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಆರೋಗ್ಯ ಸ್ಥಿತಿ ಚಿಂತಾಜನಕವಾಗಿದೆ.
ಈ ಬಗ್ಗೆ ಬಸವೇಶ್ವರ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.