ಹೊಸದಿಲ್ಲಿ, ನ. 16 (DaijiworldNews/HR): ಕೇರಳದ ಪತ್ರಕರ್ತ ಸಿದ್ದೀಕ್ ಕಪ್ಪನ್ ಅವರು ಉತ್ತರ ಪ್ರದೇಶ ಪೊಲೀಸರಿಂದ ಬಂಧನಕ್ಕೊಳಗಾಗಿದ್ದು, ಅವರಿಗೆ ಮಧ್ಯಂತರ ಜಾಮೀನು ನೀಡಲು ಸುಪ್ರೀಂ ಕೋರ್ಟ್ ನಿರಾಕರಿಸಿದ್ದು, ಈ ಪ್ರಕರಣದ ಬಗ್ಗೆ ಪ್ರತಿಕ್ರಿಯೆ ಕೋರಿ ಉತ್ತರ ಪ್ರದೇಶ ಸರಕಾರಕ್ಕೆ ನೋಟಿಸ್ ಜಾರಿಗೊಳಿಸಿದೆ.
ಸಿದ್ದೀಕ್ ಕಪ್ಪನ್ ಅವರ ಅರ್ಜಿಯ ವಿಚಾರಣೆಯನ್ನು ನವೆಂಬರ್ 20ರಂದು ನಡೆಸುವುದಾಗಿ ಸುಪ್ರೀಂ ಕೋರ್ಟ್ ಹೇಳಿದ್ದು, ಈ ಪ್ರಕರಣದ ಬಗ್ಗೆ ಪ್ರತಿಕ್ರಿಯೆ ಕೋರಿ ಉತ್ತರ ಪ್ರದೇಶ ಸರಕಾರಕ್ಕೆ ನೋಟಿಸ್ ಜಾರಿಗೊಳಿಸಿದೆ.
ಇನ್ನು ಕೇರಳ ಕಾರ್ಯನಿರತ ಪತ್ರಕರ್ತರ ಸಂಘ ಸಲ್ಲಿಸಿದ್ದ ಹೇಬಿಯಸ್ ಕಾರ್ಪಸ್ ಅರ್ಜಿಯ ವಿಚಾರಣೆ ನಡೆಸಿದ ಮುಖ್ಯ ನ್ಯಾಯಾಧೀಶ ಎಸ್.ಎ. ಬೊಬ್ಡೆಯವರ ನೇತೃತ್ವದ ಪೀಠ, ಜಾಮೀನಿಗಾಗಿ ಅರ್ಜಿದಾರರು ಅಲಹಾಬಾದ್ ಹೈಕೋರ್ಟನ್ನು ಯಾಕೆ ಸಂಪರ್ಕಿಸಿಲ್ಲ ಎಂದು ಪ್ರಶ್ನಿಸಿತು.
ಇದಕ್ಕೆ ಪ್ರತಿಕ್ರಿಯಿಸಿದ ಕಪ್ಪನ್ ಪರ ವಕೀಲ ಕಪಿಲ್ ಸಿಬಲ್, 'ನನಗೆ ಕಪ್ಪನ್ ಅವರನ್ನು ಭೇಟಿಯಾಗಲು ಕೂಡ ಸಾಧ್ಯವಾಗುತ್ತಿಲ್ಲ, ನಾನು ಹೈಕೋರ್ಟ್ ಗೆ ಹೋಗುವುದು ಹೇಗೆ ಎಂದು ಹೇಳಿದ್ದಾರೆ.