ಬೆಂಗಳೂರು,ನ. 16 (DaijiworldNews/HR): ಡಿ.ಜೆ ಹಳ್ಳಿಯಲ್ಲಿ ನಡೆದ ಶಾಸಕ ಅಖಂಡ ಶ್ರೀನಿವಾಸಮೂರ್ತಿ ಅವರ ಮನೆ ದ್ವಂಸ ಪ್ರಕಣಕ್ಕೆ ಸಂಭಂಧಿಸಿದಂತೆ ತಲೆಮರೆಸಿಕೊಂಡಿರುವ ಆರೋಪಿ ಮಾಜಿ ಮೇಯರ್ ಆರ್. ಸಂಪತ್ರಾಜ್ನ ಸ್ನೇಹಿತ ರಿಯಾಜುದ್ದೀನ್ ಎಂಬಾತನನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.
ಆರೋಪಿ ರಿಯಾಜುದ್ದೀನ್ ಪ್ರಕರಣದ ಆರೋಪಿಗಳಿಗೆ ಕೆಲ ದಿನ ಆಶ್ರಯ ನಿಡುತ್ತಿದ್ದ ಆರೋಪದಡಿ ಬಂಧಿಸಲಾಗಿದೆ. ಇದೀಗ ಸಂಪತ್ ರಾಜ್ ಹಾಗೂ ಮಾಜಿ ಕಾರ್ಪೋರೇಟರ್ ಜಾಕೀರ್ ಇಬ್ಬರೂ ತಲೆಮರೆಸಿಕೊಂಡು ಓಡಾಡುತ್ತಿದ್ದಾರೆ.
ಇನ್ನುಆರೋಪಿಗಳು ಪರಾರಿಯಾಗಲು ರಿಯಾಜುದ್ದೀನ್ ಸಹಾಯ ಮಾಡಿದ್ದ. ತನ್ನ ಕಾರಿನಲ್ಲಿ ಆರೋಪಿಗಳನ್ನು ನಾಗರಹೊಳೆ ಬಳಿ ಇರುವ ಫಾರ್ಮ್ ಹೌಸ್ಗೆ ಕರೆದೊಯ್ದಿದ್ದ. ಅಲ್ಲಿಯೇ ಆರೋಪಿಗಳು ಕೆಲ ದಿನ ಉಳಿದುಕೊಂಡಿದ್ದ ಎಂದು ಸಿಸಿಬಿ ಜಂಟಿ ಕಮಿಷನರ್ ಸಂದೀಪ್ ಪಾಟೀಲ ತಿಳಿಸಿದ್ದಾರೆ.