ಚಂಡೀಘಡ,ನ. 16 (DaijiworldNews/HR): ಕಾಂಗ್ರೆಸ್ ಸಂಸದ ಮನೀಷ್ ತಿವಾಗೆ ಕೊರೊನಾ ಸೋಂಕು ದೃಢಪಟ್ಟಿದೆ.
ಈ ಕುರಿತು ಟ್ವೀಟ್ ಮಾಡಿರುವ ಅವರು, ನಾನು ಇಂದು ಮಧ್ಯಾಹ್ನ ಕೊರೊನಾ ಪರೀಕ್ಷೆ ಮಾಡಿಸಿದಾಗ ನನಗೆ ಪಾಸಿಟಿವ್ ಇರುವುದು ದೃಢಪಟ್ಟಿದೆ. ಇತರ ಯಾವುದೇ ರೋಗ ಲಕ್ಷಣಗಳಿಲ್ಲ. ಕಳೆದ ಕೆಲ ದಿನಗಳಿಂದ ನನ್ನ ಜೊತೆ ಸಂಪರ್ಕಕ್ಕೆ ಬಂದ ಎಲ್ಲರೂ ಮುಂಜಾಗ್ರತೆ ವಹಿಸಿ ಎಂದು ತಿಳಿಸಿದ್ದಾರೆ.
ಮನೀಷ್ ತಿವಾ ಅವರು ಅಹಮ್ಮದ್ ಪಟೇಲ್ ಗುರುಗ್ರಾಂದಲ್ಲಿರುವ ಮೆಂದಾಂತ ಆಸ್ಪತ್ರೆಯಲ್ಲಿ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಇನ್ನು ಮನೀಷ್ ತಿವಾರಿ ಅವರು ಪಂಜಾಬ್ ರಾಜ್ಯದ ಆನಂದಪುರ್ ಸಾಹಿಬ್ ಲೋಕಸಭಾ ಕ್ಷೇತ್ರದ ಸಂಸದರಾಗಿದ್ದಾರೆ.