ಚಂಡೀಘಡ, ನ 17. (DaijiworldNews/HR): ಹರ್ಯಾಣದ ರಾಜ್ಯಪಾಲ ಸತ್ಯದೇವ್ ನರೈನ್ ಆರ್ಯ(81)ಗೆ ಕೊರೊನಾ ಸೋಂಕು ದೃಢಪಟ್ಟಿದೆ.
ಸತ್ಯದೇವ್ ಅವರನ್ನು ಪಂಜಾಬ್ನ ಮೊಹಾಲಿ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದದು, ಮುಂಜಾಗ್ರತಾ ಕ್ರಮವಾಗಿ ತೀವ್ರನಿಗಾ ಘಟಕದಲ್ಲಿಟ್ಟು ಚಿಕಿತ್ಸೆ ನೀಡಲಾಗುತ್ತಿದೆ ಎಂದು ತಿಳಿದು ಬಂದಿದೆ.
ಈ ಕುರಿತು ಟ್ವೀಟ್ ಮಾಡಿರುವ ಹರ್ಯಾಣದ ಮುಖ್ಯಮಂತ್ರಿ ಮನೋಹರ್ ಲಾಲ್, ರಾಜ್ಯಪಾಲ ಸತ್ಯದೇವ ನಾರಾಯಣ್ ಆರ್ಯ ಅವರು ಶೀಘ್ರ ಗುಣಮುಖರಾಗಲಿ ಎಂದು ಹಾರೈಸಿದ್ದಾರೆ.
ಇನ್ನು ಸತ್ಯದೇವ ನರೈನ್ ಆರ್ಯ ಅವರ ಆರೋಗ್ಯ ಸ್ಥಿರವಾಗಿದ್ದು, ಅವರಿಗೆ ಚಿಕಿತ್ಸೆ ಮುಂದುವರೆಸಲಾಗಿದೆ ಎಂದು ಆಸ್ಪತ್ರೆಯ ಮೂಲಗಳು ತಿಳಿಸಿವೆ.