ಬೆಂಗಳೂರು, ನ 17. (DaijiworldNews/HR): ತಮಿಳುನಾಡು ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ಮಹಾಘಟಬಂಧನ್ ಮುಂದುವರಿಯಲಿದೆ ಎಂದು ತಮಿಳುನಾಡು ರಾಜ್ಯ ಕಾಂಗ್ರೆಸ್ ಉಸ್ತುವಾರಿ ವಹಿಸಿಕೊಂಡಿರುವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಅವರು, "ತಮಿಳುನಾಡಿನಲ್ಲಿ ಡಿಎಂಕೆ ಮತ್ತು ಇತರ ಪಕ್ಷಗಳ ಮೈತ್ರಿ ಹೊಂದಾಣಿಕೆ ಯಾಗಿದ್ದು, 2019ರ ಲೋಕಸಭಾ ಚುನಾವಣೆಯಲ್ಲಿ ಗೆಲುವು ಪಡೆದಿತ್ತು. ಮುಂದಿನ ವರ್ಷ ನಡೆಯಲಿರುವ ವಿಧಾನಸಭೆ ಚುನಾವಣೆಯಲ್ಲಿ ಮತ್ತೆ ನಾವು ಮೈತ್ರಿ ಮಾಡುತ್ತೇವೆ ಮತ್ತು ಮೈತ್ರಿಯನ್ನು ಬಲಪಡಿಸುವಲ್ಲಿ ಕಾಂಗ್ರೆಸ್ ತನ್ನ ಪಾತ್ರ ವಹಿಸಲಿದೆ" ಎಂದು ಹೇಳಿದ್ದಾರೆ.
ಬಿಹಾರದಲ್ಲಿ ಮಹಾಘಟಬಂಧನ್ ಸೋತ ಹಿನ್ನೆಲೆ ತಮಿಳುನಾಡಿನಲ್ಲಿಯೂ ಕಾಂಗ್ರೆಸ್ ಪ್ರತ್ಯೇಕವಾಗಿ ಚುನಾವಣೆ ಎದುರಿಸಲಿದೆ ಎಂದು ನಿರೀಕ್ಷಿಸಲಾಗಿತ್ತು, ಆದರೆ ವಿಧಾನಸಭಾ ಚುನಾವಣೆಯಲ್ಲಿ ಮಹಾಘಟ್ ಬಂಧನ್ ಮುಂದುವರೆಯಲಿದೆ ಎಂದು ದಿನೇಶ್ ಗುಂಡೂರಾವ್ ಹೇಳಿದ್ದಾರೆ.