ಬೆಂಗಳೂರು, ನ.17 (DaijiworldNews/PY): ಕರ್ನಾಟಕ ವೀರಶೈವ-ಲಿಂಗಾಯತ ಅಭಿವೃದ್ಧಿ ನಿಗಮ ರಚನೆಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಆದೇಶ ನೀಡಿದ್ದಾರೆ.
ಈ ಬಗ್ಗೆ ಸಿಎಂ ಅವರ ಗೃಹ ಕಚೇರಿಯಿಂದ ಪ್ರಕಟಣೆ ಹೊರಡಿಸಲಾಗಿದ್ದು, "ರಾಜ್ಯದಲ್ಲಿ ವೀರಶೈವ ಹಾಗೂ ಲಿಂಗಾಯತ ಸಮಾಜದ ಜನಾಂಗದವರು ಅಧಿಕ ಸಂಖ್ಯೆಯಲ್ಲಿದ್ದಾರೆ. ಇವರ ಪೈಕಿ ಆರ್ಥಿಕ, ಸಾಮಾಜಿಕ ಹಾಗೂ ಶೈಕ್ಷಣಿಕವಾಗಿ ಅತ್ಯಂತ ಹಿಂದುಳಿದವರೂ ಇದ್ದಾರೆ. ಈ ಸಮಾಜದ ಸರ್ವತೋಮುಖ ಅಭಿವೃದ್ಧಿಯ ನಿಗಮವನ್ನು ಸ್ಥಾಪಿಸಿವುದು ಅಗತ್ಯವಿರುವ ಕಾರಣ ತಕ್ಷಣದಿಂದ ಜಾರಿಗೆ ಬರುವಂತೆ ನಿಗಮವನ್ನು ಸ್ಥಾಪಿಸಲು ಆದೇಶ ನೀಡಲಾಗಿದೆ" ಎಂದು ತಿಳಿಸಿದ್ದಾರೆ.
ಎರಡು ದಿನಗಳ ಹಿಂದೆ ಸರ್ಕಾರ ಮರಾಠಾ ಅಭಿವೃದ್ಧಿ ನಿಗಮ ಸ್ಥಾಪನೆ ಆದೇಶ ಕೊಟ್ಟಿದ್ದು, ಈಗ ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮ ಸ್ಥಾಪನೆಗೂ ಆದೇಶಿಸಿದೆ.
ಮರಾಠಾ ಅಭಿವೃದ್ಧಿ ನಿಗಮ ಸ್ಥಾಪನೆಗೆ ಆದೇಶ ನೀಡಿದ್ದ ಬೆನ್ನಲ್ಲೇ, ಲಿಂಗಾಯತ ಸಮುದಾಯದ ಸಚಿವರು ಸೇರಿದಂತೆ ಕಾಂಗ್ರೆಸ್ ನಿಯೋಗವೂ ಕೂಡಾ ಶೇ.16 ರಷ್ಟು ತಮ್ಮ ಸಮುದಾಯಕ್ಕೂ ಕೂಡಾ ಮೀಸಲು ಕಲ್ಪಿಸುವಂತೆ ಆಗ್ರಹಿಸಿದ್ದರು.