ನವದೆಹಲಿ,ನ 17. (DaijiworldNews/HR): ಸೋಷಿಯಲ್ ಜ್ಯೂರಿಸ್ಟ್ ಸ್ವಯಂ ಸೇವಾ ಸಂಸ್ಥೆ ಸಿಬಿಎಸ್ಇ 10 ಮತ್ತು 12ನೇ ತರಗತಿ ವಿದ್ಯಾರ್ಥಿಗಳ ಪರೀಕ್ಷಾ ಶುಲ್ಕ ಮನ್ನಾ ಮಾಡುವಂತೆ ಕೋರಿ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಸಲ್ಲಿಸಿದ್ದು, ಅದನ್ನು ಸುಪ್ರೀಂಕೋರ್ಟ್ ವಜಾಗೊಳಿಸಿದೆ.
ಕೊರೊನಾದಿಂದಾಗಿ ಮಕ್ಕಳ ಹೆತ್ತವರು ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದಾರೆ, ಇಂತಹ ಪರಿಸ್ಥಿತಿಯಲ್ಲಿ ಪ್ರಸಕ್ತ ಶೈಕ್ಷಣಿಕ ವರ್ಷದ ಪರೀಕ್ಷಾ ಶುಲ್ಕ ಕಟ್ಟುವುದು ಕಷ್ಟ. ಹೀಗಾಗಿ ಶುಲ್ಕದಿಂದ ವಿನಾಯಿತಿ ನೀಡಬೇಕೆಂದು ಕೇಂದ್ರೀಯ ಪ್ರೌಢಶಿಕ್ಷಣ ಮಂಡಳಿ ಹಾಗೂ ದೆಹಲಿ ಸರ್ಕಾರಕ್ಕೆ ಸೂಚಿಸಬೇಕೆಂದು 'ಸೋಷಿಯಲ್ ಜ್ಯೂರಿಸ್ಟ್' ಸಂಸ್ಥೆ ಮನವಿ ಮಾಡಿತ್ತು.
ಇದೀಗ ನ್ಯಾಯಮೂರ್ತಿಗಳಾದ ಅಶೋಕ್ ಭೂಷಣ್, ಆರ್.ಸುಭಾಶ್ ರೆಡ್ಡಿ ಮತ್ತು ಎಂ.ಆರ್.ಶಾ ಅವರಿದ್ದ ಪೀಠವು ಈ ಅರ್ಜಿಯನ್ನು ತಿರಸ್ಕರಿಸಿದೆ.