ಹುಬ್ಬಳ್ಳಿ, ನ.17 (DaijiworldNews/PY): "ಸಚಿವ ಸಂಪುಟ ವಿಸ್ತರಣೆಯ ವಿಚಾರವನ್ನು ಸಿಎಂ ಬಿ.ಎಸ್.ಯಡಿಯೂರಪ್ಪ ಅವರು ನಿರ್ಧರಿಸುತ್ತಾರೆ" ಎಂದು ಜಿಲ್ಲಾ ಉಸ್ತುವಾರಿ ಸಚಿವ ಜಗದೀಶ ಶೆಟ್ಟರ್ ಹೇಳಿದ್ದಾರೆ.
ನಗರದಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, "ಸಚಿವ ಸಂಪುಟ ವಿಸ್ತರಣೆಯ ವಿಚಾರ ಸಿಎಂ ಬಿಎಸ್ವೈ ಅವರ ವಿವೇಚನೆಗೆ ಬಿಟ್ಟಿದ್ದು, ಸಚಿವ ಸ್ಥಾನದ ಆಕಾಂಕ್ಷಿಗಳ ಸಂಖ್ಯೆ ದೊಡ್ಡದಿದ್ದು, ಸಚಿವ ಸ್ಥಾನ ಯಾರಿಗೆ ನೀಡಬೇಕು, ಯಾರನ್ನು ಬಿಡಬೇಕು ಎನ್ನುವ ವಿಚಾರವನ್ನು ಸಿಎಂ ಬಿಎಸ್ವೈ ಅವರು ನಿರ್ಧರಿಸುತ್ತಾರೆ" ಎಂದಿದ್ದಾರೆ.
"ಇನ್ನು ಮಸ್ಕಿ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿ ಯಾರು ಆಗಬೇಕು ಎನ್ನುವುದನ್ನು ಹೈಕಮಾಂಡ್ ತೀರ್ಮಾನಿಸಲಿದೆ" ಎಂದು ತಿಳಿಸಿದ್ದಾರೆ.