ನವದೆಹಲಿ,ನ 17. (DaijiworldNews/HR): ದೇಶದಲ್ಲಿ ಕೊರೊನಾ ಪ್ರಕರಣಗಳು ಹೆಚ್ಚಾಗಲು ತಬ್ಲಿಗ್ ಜಮಾತ್ ಸಭೆ ಕಾರಣ ಎಂದು ಕೆಲವು ಮಾಧ್ಯಮಗಳು ವರದಿ ಮಾಡಿದ್ದು, ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರವು ಸಲ್ಲಿಸಿರುವ ಪ್ರಮಾಣ ಪತ್ರ (ಅಫಿಡವಿಟ್) ತೃಪ್ತಿಕರವಾಗಿಲ್ಲ ಎಂದು ಸುಪ್ರೀಂಕೋರ್ಟ್ ತಿಳಿಸಿದೆ.
'ಕೇಂದ್ರ ಸರ್ಕರ ಸೂಕ್ತವಾದ ಪ್ರಮಾಣಪತ್ರವನ್ನು ಸಲ್ಲಿಸಿಲ್ಲ. ನೀವು ಸಲ್ಲಿರುವ ಪ್ರಮಾಣಪತ್ರದಲ್ಲಿ ಪ್ರಮುಖ ಎರಡು ಪ್ರಶ್ನೆಗಳಿಗೆ ಉತ್ತರವೇ ಇಲ್ಲ. ಈ ನಡೆ ಒಪ್ಪತಕ್ಕದ್ದಲ್ಲ' ಎಂದು ಮುಖ್ಯ ನ್ಯಾಯಮೂರ್ತಿ ಎಸ್.ಎ.ಬೊಬಡೆ, ನ್ಯಾಯಮೂರ್ತಿಗಳಾದ ಎ.ಎಸ್.ಬೋಪಣ್ಣ ಮತ್ತು ವಿ.ರಾಮಸುಬ್ರಮಣ್ಯಂ ಅವರನ್ನೊಳಗೊಂಡ ತ್ರಿ ಸದಸ್ಯ ಪೀಠವು ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಅವರಿಗೆ ಹೇಳಿತು.
ಇನ್ನುತಬ್ಲಿಗ್ ಜಮಾತ್ ಸಭೆಯಿಂದಾಗಿಯೇ ದೇಶದಲ್ಲಿ ಕೊರೊನಾ ಪ್ರಕರಣಗಳು ಹೆಚ್ಚಾಗಿರುವುದಾಗಿ ಕೆಲವು ಮಾಧ್ಯಮಗಳು ಪ್ರಸಾರ ಮಾಡಿದ್ದು. ಆ ಮೂಲಕ ಕೋಮು ದ್ವೇಷ ಹರಡುತ್ತಿವೆ' ಎಂದು ಆರೋಪಿಸಿ ಜಮೀಯತ್ ಉಲಮಾ-ಐ-ಹಿಂದ್ ಹಾಗೂ ಇತರ ಸಂಘಟನೆಗಳು ಅರ್ಜಿ ಸಲ್ಲಿಸಿದ್ದವು.