ಬೆಂಗಳೂರು, ನ.18 (DaijiworldNews/PY): ಪ್ರಧಾನಿ ನರೇಂದ್ರ ಮೋದಿ ಬೆಂಗಳೂರು ಟೆಕ್ ಶೃಂಗಸಭೆ - 2020 ಅನ್ನು ಅವರು ನ.19ರ ಗುರುವಾರದಂದು ವಿಡಿಯೋ ಕಾನ್ಫರೆನ್ಸ್ ಮೂಲಕ ಉದ್ಘಾಟಿಸಲಿದ್ದಾರೆ.
ಬೆಂಗಳೂರು ಟೆಕ್ ಶೃಂಗಸಭೆ - 2020 ಅನ್ನು ಕರ್ನಾಟಕ ನಾವೀನ್ಯತೆ ಹಾಗೂ ತಂತ್ರಜ್ಞಾನ ಸೊಸೈಟಿ, ಕರ್ನಾಟಕ ಸರ್ಕಾರದ ಮಾಹಿತಿ ತಂತ್ರಜ್ಞಾನ, ಜೈವಿಕ ತಂತ್ರಜ್ಞಾನ ಹಾಗೂ ನವೋದ್ಯಮದ ವಿಷನ್ ಗ್ರೂಪ್, ಭಾರತ ಸಾಫ್ಟ್ ವೇರ್ ತಂತ್ರಜ್ಞಾನ ಪಾರ್ಕ್ ಹಾಗೂ ಎಂಎಂ ಆಕ್ಟಿವ್ ಸೈ-ಟೆಕ್ ಕಮ್ಯುನಿಕೇಷನ್ಸ್ ಸಹಯೋಗದಲ್ಲಿ ಕರ್ನಾಟಕ ಸರ್ಕಾರವು ಆಯೋಜಿಸಿರುವ ಈ ಶೃಂಗಸಭೆ ನ.19ರಿಂದ ನ.21ರವರೆಗೆ ನಡೆಯಲಿದೆ.
ಶೃಂಗಸಭೆಯಲ್ಲಿ, ಆಸ್ಟ್ರೇಲಿಯಾದ ಪ್ರಧಾನಿ ಸ್ಕಾಟ್ ಮಾರಿಸನ್, ಸ್ವಿಸ್ ಕಾನ್ಫೆಡರೇಶನ್ ಉಪಾಧ್ಯಕ್ಷ ಗೈ ಪಾರ್ಮೆಲಿನ್ ಹಾಗೂ ಇತರ ಅನೇಕ ಪ್ರಮುಖ ವ್ಯಕ್ತಿಗಳು ಪಾಲ್ಗೊಳ್ಳಲಿದ್ದಾರೆ.
ಅವರಲ್ಲದೆ, ಉದ್ಯಮದ ನಾಯಕರು, ತಂತ್ರಜ್ಞರು, ಸಂಶೋಧಕರು, ನಾವೀನ್ಯಕಾರರು, ಹೂಡಿಕೆದಾರರು, ನೀತಿ ನಿರೂಪಕರು, ಭಾರತ ಹಾಗೂ ವಿಶ್ವದಾದ್ಯಂತದ ಶಿಕ್ಷಣ ತಜ್ಞರು ಕೂಡಾ ಈ ಶೃಂಗಸಭೆಯಲ್ಲಿ ಭಾಗವಹಿಸಲಿದ್ದಾರೆ.