ನವದೆಹಲಿ, ನ.18 (DaijiworldNews/PY): "ಮರಾಠ ನಿಗಮ ರಚನೆಯನ್ನು ಖಂಡಿಸಿ ಡಿ.5ರಂದು ನಡೆಸಲು ನಿರ್ಧರಿಸಿರುವ ಕರ್ನಾಟಕ ಬಂದ್ಗೆ ಅವಕಾಶ ಕಲ್ಪಿಸುವುದಿಲ್ಲ" ಎಂದು ಸಿಎಂ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ.
"ಮರಾಠ ನಿಗಮದ ರಚನೆಯನ್ನು ಮರಾಠ ಸಮುದಾಯದಲ್ಲಿನ ಹಿಂದುಳಿದವರ ನೆರವಿಗೆ ಸ್ಥಾಪನೆ ಮಾಡಲಾಗಿದೆ. ಮರಾಠ ಸಮುದಾಯದವರು ಬೆಳಗಾವಿಯಲ್ಲಿ ಮಾತ್ರ ಇಲ್ಲ. ಅವರು ವಿಶ್ವ ಕನ್ನಡ ಸಮ್ಮೇಳನಕ್ಕೆ ಸಂಪೂರ್ಣ ಬೆಂಬಲ ನೀಡಿದ್ದರು. ಅವರೂ ಕೂಡಾ ಕನ್ನಡಿಗರೇ" ಎಂದಿದ್ದಾರೆ.
"ಗಡಿ ಸಮಸ್ಯೆಯ ಬಗ್ಗೆ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ಅವರು ಮತ್ತೆ ಸಮಸ್ಯೆ ಶುರು ಮಾಡಿದ್ದಾರೆ. ಗಡಿ ವಿಚಾರದ ಬಗ್ಗೆ ಮಹಾಜನ್ ಆಯೋಗದ ವರದಿಯೇ ಅಂತಿಮವಾಗಿದೆ" ಎಂದು ತಿಳಿಸಿದ್ದಾರೆ.
ಸಂಪುಟ ವಿಸ್ತರಣೆ ವಿಚಾರದ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು, "ಈ ಬಗ್ಗೆ ಸಂಜೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾರೊಂದಿಗೆ ಚರ್ಚೆ ನಡೆಸಲಾಗುವುದು. ಅವರ ಭೇಟಿಯ ಬಳಿಕ ಸಂಪುಟ ವಿಸ್ತರಣೆಯ ಬಗ್ಗೆ ಅಂತಿಮ ತೀರ್ಮಾನ ತೆಗೆದುಕೊಳ್ಳಲಾಗುವುದು" ಎಂದಿದ್ದಾರೆ.