ಬೆಂಗಳೂರು, ನ. 19 (DaijiworldNews/MB) : ಬೆಂಗಳೂರಿನ ಡಿಜೆ ಹಳ್ಳಿ ಹಾಗೂ ಕೆಜಿ ಹಳ್ಳಿಯಲ್ಲಿ ನಡೆದ ಗಲಭೆ ಪ್ರಕರಣಕ್ಕೆ ಸಂಬಂಧಿಸಿ ಸೋಷಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (ಎಸ್ಡಿಪಿಐ) ದ ನಾಲ್ಕು ಕಚೇರಿಗಳು ಸೇರಿದಂತೆ 43 ಕಡೆ ರಾಷ್ಟ್ರೀಯ ತನಿಖಾ ದಳ (ಎನ್ಐಎ) ಬುಧವಾರ ಶೋಧ ಕಾರ್ಯ ನಡೆಸಿದೆ.
ಇನ್ನು ಈ ಬಗ್ಗೆ ಮಾಹಿತಿ ನೀಡಿರುವ ಅಧಿಕಾರಿಗಳು, ''ಶೋಧದ ವೇಳೆ ಕತ್ತಿಗಳು, ಚಾಕುಗಳು, ಕಬ್ಬಿಣದ ಸರಳುಗಳಂತಹ ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಳ್ಳಲಾಗಿದೆ'' ಎಂದು ತಿಳಿಸಿದ್ದಾರೆ.
ಪುಲಿಕೇಶಿನಗರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಶಾಸಕ ಆರ್.ಅಖಂಡ ಶ್ರೀನಿವಾಸಮೂರ್ತಿ ಅವರ ಸಂಬಂಧಿ ಪೈಗಂಬರ್ ಬಗ್ಗೆ ಅವಹೇಳನಕಾರಿ ಪೋಸ್ಟ್ ಹಾಕಿದ್ದ ಹಿನ್ನೆಲೆಯಲ್ಲಿ ಉಂಟಾದ ಈ ಗಲಭೆಯ ಸಂದರ್ಭದಲ್ಲಿ ಶಾಸಕರ ನಿವಾಸಕ್ಕೆ ಬೆಂಕಿ ಹಚ್ಚಲಾಗಿದೆ. ಹಾಗೆಯೇ ಆ ಪ್ರದೇಶದಲ್ಲಿನ ಹಲವು ಕಾರುಗಳಿಗೂ ಬೆಂಕಿ ಹಚ್ಚಲಾಗಿದೆ. ಇನ್ನು ಈ ಪ್ರಕರಣಕ್ಕೆ ಸಂಬಂಧಿಸಿ ಮೇಯರ್ ಸಂಪತ್ ರಾಜ್ರನ್ನು ಬಂಧಿಸಲಾಗಿದೆ. ಹಾಗೆಯೇ ಇದಕ್ಕೂ ಮುನ್ನ ಈ ಪ್ರಕರಣಕ್ಕೆ ಸಂಬಂಧಿಸಿ 350ಕ್ಕೂ ಅಧಿಕ ಮಂದಿಯನ್ನು ಬಂಧಿಸಲಾಗಿದೆ.