ಬೆಳಗಾವಿ, ನ. 19 (DaijiworldNews/MB) : ''ಸಚಿವ ಸ್ಥಾನಕ್ಕಾಗಿ ಶಾಸಕರು ಲಾಬಿ ಮಾಡುವುದರಲ್ಲಿ ತಪ್ಪೇನಿಲ್ಲ'' ಎಂದು ಸಹಕಾರ ಸಚಿವ ಎಸ್.ಟಿ.ಸೋಮಶೇಖರ್ ಅವರು ಬುಧವಾರ ಹೇಳಿದರು.
ಬೆಳಗಾವಿಯಲ್ಲಿ ಸಹಕಾರ ಸಪ್ತಾಹ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಬಳಿಕ ಮಾತನಾಡಿ ಅವರು, ''ಸಚಿವ ಸ್ಥಾನಕ್ಕಾಗಿ ಶಾಸಕರು ಲಾಬಿ ಮಾಡುವುದರಲ್ಲಿ ತಪ್ಪೇನಿಲ್ಲ, ಅದು ಸಾಮಾನ್ಯ. ಜನಪರ ಕೆಲಸಕ್ಕೆ ಸಹಾಯ ಮಾಡುವ ನಿಟ್ಟಿನಲ್ಲಿ ಮಾಡಿದರೆ ಅದರಲ್ಲಿ ಯಾವ ತಪ್ಪೂ ಇಲ್ಲ. ಕೊನೆಯಲ್ಲಿ ಮುಖ್ಯಮಂತ್ರಿಗಳು ಯಾರು ಸಚಿವ ಸಂಪುಟ ಸೇರಲಿದ್ದಾರೆ ಎಂದು ತೀರ್ಮಾನಿಸುತ್ತಾರೆ'' ಎಂದು ಹೇಳಿದರು.
ಬುಧವಾರವಷ್ಟೇ ಮುಖ್ಯಮಂತ್ರಿ ಯಡಿಯೂರಪ್ಪ ದೆಹಲಿಗೆ ತೆರಳಿದ್ದು ವಾಪಾಸ್ ಬಂದಿದ್ದಾರೆ. ಸಂಪುಟ ವಿಸ್ತರಣೆಗೆ ಹೈಕಮಾಂಡ್ ಗ್ರೀನ್ ಸಿಗ್ನಲ್ ನೀಡಿಲ್ಲ ಎಂದು ಹೇಳಲಾಗಿದೆ.