ಶ್ರೀನಗರ,ನ.19 (DaijiworldNews/HR): ಭಾರತೀಯ ಸೇನೆ ಎನ್ಕೌಂಟರ್ ನಡೆಸಿ ನಾಲ್ವರು ಭಯೋತ್ಪಾದಕರನ್ನು ಗುಂಡಿಕ್ಕಿ ಹತ್ಯೆಗೈದ ಘಟನೆ ಇಂದು ಬೆಳಿಗ್ಗೆ ಜಮ್ಮುವಿನ ನಾಗ್ರೋಟಾದ ಬಾನ್ ಟೋಲ್ ಪ್ಲಾಜಾದಲ್ಲಿ ನಡೆದಿದೆ.
ಭಾರತೀಯ ಸೇನೆಗೆ ಭಯೋತ್ಪಾದಕರು ಅಡಗಿರುವ ಬಗ್ಗೆ ಮಾಹಿತಿ ತಿಳಿದು ಜಮ್ಮು -ಶ್ರೀನಗರ ರಾಷ್ಟ್ರೀಯ ಹೆದ್ದಾರಿಯ ಸಂಚಾರ ತಡೆದು ನಾಕಾ ಬಂದಿ ಹಾಕಿ ವಾಹನಗಳ ತಪಾಸಣೆ ನಡೆಸುತ್ತಿದ್ದರು. ಈ ವೇಳೆ ಭದ್ರತಾ ಪಡೆಗಳ ಮೇಲೆ ಗುಂಡು ಹಾರಿಸಿದ ಭಯೋತ್ಪಾದಕರ ಗುಂಪು, ನಂತರ ಅರಣ್ಯ ಪ್ರದೇಶದ ಕಡೆಗೆ ಓಡಿಹೋದರು. ಕೂಡಲೇ ಭದ್ರತಾ ಪಡೆ ಎನ್ ಕೌಂಟರ್ ಆರಂಭಿಸಿದೆ.
ಇನ್ನು ಈ ಘಟನೆಯಲ್ಲಿ 4 ಭಯೋತ್ಪಾದಕರು ಸಾವನ್ನಪ್ಪಿದ್ದಾರೆ ಜಮ್ಮು-ಶ್ರೀನಗರ ರಾಷ್ಟ್ರೀಯ ಹೆದ್ದಾರಿಯ ಉದ್ದಕ್ಕೂ ನಾಗ್ರೋಟಾದಲ್ಲಿ ಭದ್ರತೆಯನ್ನು ಬಿಗಿಗೊಳಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.