ಹುಬ್ಬಳ್ಳಿ, ನ.19 (DaijiworldNews/HR): ವ್ಯಕ್ತಿಯೊಬ್ಬರ ಮೃತದೇಹ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆ ಹುಬ್ಬಳ್ಳಿಯ ಚೇತನಾ ಕಾಲೇಜು ಎದುರಿಗಿನಲ್ಲಿ ಬಸ್ ನಿಲ್ದಾಣದಲ್ಲಿ ನಡೆದಿದೆ.
ನೇಣುಬಿಗಿದ ವ್ಯಕ್ತಿಯು ಜೀನ್ಸ್ ಪ್ಯಾಂಟ್ ಹಾಗೂ ಟಿ ಶರ್ಟ್ ಧರಿಸಿದ್ದಾನೆ. ಆತನಿಗೆ ಸುಮಾರು 45ರಿಂದ 48 ವರ್ಷ ವಯಸ್ಸಾಗಿರಬಹುದು ಎಂದು ಅಂದಾಜಿಸಲಾಗಿದೆ.
ವಾಕಿಂಗ್ಗೆ ಹೋಗುತ್ತಿದ್ದ ಜನ ಬಸ್ ನಿಲ್ದಾಣದಲ್ಲಿ ನೇತಾಡುತ್ತಿದ್ದ ಮೃತದೇಹವನ್ನು ನೋಡಿ ವಿದ್ಯಾನಗರ ಠಾಣೆಯ ಪೊಲೀಸರಿಗೆ ಮಾಹಿತಿ ನೀಡಿದ್ದು, ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ.
ಇನ್ನು ಆತ್ಮಹತ್ಯೆಗೆ ಕಾರಣ ಹಾಗೂ ವ್ಯಕ್ತಿಯ ಗುರುತು ಪತ್ತೆಯಾಗಿಲ್ಲ ಎಂದು ತಿಳಿದು ಬಂದಿದೆ.