ನವದೆಹಲಿ, ನ.19 (DaijiworldNews/HR): ಕೊರೊನಾ ಪ್ರಕರಣಗಳು ದಿನೇ ದಿನೇ ಹೆಚ್ಚಾಗುತ್ತಿರುವ ಹಿನ್ನಲೆಯಲ್ಲಿ ಅದನ್ನು ನಿಯಂತ್ರಿಸು ಸಲುವಾಗಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಇಂದು ಸರ್ವಪಕ್ಷ ಸಭೆ ಕರೆದಿದ್ದಾರೆ.
ಕೊರೊನಾ ಹೆಚ್ಚಾಗುತ್ತಿರುವ ಹಿನ್ನಲೆಯಲ್ಲಿ ದೆಹಲಿಯಲ್ಲಿ ನಡೆಯುವ ಸಮಾರಂಭಗಳಲ್ಲಿ 200 ಮಂದಿ ಅತಿಥಿಗಳಿಗೆ ಸೇರಲು ಅವಕಾಶ ನೀಡಿದ್ದ ಆದೇಶವನ್ನು ಹಿಂಪಡೆಯಲು ಸರ್ಕಾರ ನಿರ್ಧರಿಸಿತ್ತು. ಜೊತೆಗೆ, ಕೊರೊನಾ ಹಾಟ್ಸ್ಪಾಟ್ಗಳಾಗಿ ಪರಿವರ್ತನೆಯಾಗಬಹುದಾದ ಮಾರುಕಟ್ಟೆ ಪ್ರದೇಶಗಳಲ್ಲಿ ಲಾಕ್ಡೌನ್ ಜಾರಿಗೊಳಿಸಲು ಅಧಿಕಾರ ನೀಡುವಂತೆ ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿದೆ.
ಇನ್ನುದೀಪಾವಳಿ ಹಬ್ಬದ ಸಮಯದಲ್ಲಿ ಮಾರುಕಟ್ಟೆ ಸೇರಿದಂತೆ ಹಲವು ಕಡೆಗಳಲ್ಲಿ ಜನರು ಮಾಸ್ಕ್ ಧರಿಸದೇ, ಸಾಮಾಜಿಕ ಅಂತರ ಕಾಯ್ದುಕೊಳ್ಳದೇ ಓಡಾಡುತ್ತಿದ್ದದು ಕಂಡುಬಂದಿತ್ತು. ಮಾರ್ಗಸೂಚಿ ನಿಯಮಗಳನ್ನು ಉಲ್ಲಂಘಿಸಿರುವ ಇಂಥ ಕಡೆಗಳಲ್ಲಿ ಸೋಂಕು ಹೆಚ್ಚುವ ಸಾಧ್ಯತೆ ಇದ್ದು, ಮಾರುಕಟ್ಟೆ ಪ್ರದೇಶದಲ್ಲಿ ಲಾಕ್ಡೌನ್ ಜಾರಿಗೊಳಿಸಬೇಕಾದ್ದು ಅನಿವಾರ್ಯ ಎಂದು ಕೇಜ್ರಿವಾಲ್ ಹೇಳಿದ್ದಾರೆ.