ಬೆಂಗಳೂರು,ನ.19 (DaijiworldNews/HR): ದೇಶ-ವಿದೇಶಗಳ ವೆಬ್ಸೈಟ್ ಹಾಗೂ ರಾಜ್ಯ ಸರ್ಕಾರದ ಇ-ಪ್ರೊಕ್ಯುರ್ವೆುಂಟ್ ವೆಬ್ಸೈಟನ್ನು ಹ್ಯಾಕ್ ಮಾಡಿ ಅಕ್ರಮವಾಗಿ ಹಣ ಪಡೆಯುತಿದ್ದ ಬೆಂಗಳೂರು ಮೂಲದ ಅಂತರಾಷ್ಟ್ರೀಯ ಹ್ಯಾಕರ್ವೊಬ್ಬನನ್ನು ಬೆಂಗಳೂರು ಕೇಂದ್ರ ಅಪರಾಧ ವಿಭಾಗ(ಸಿಸಿಬಿ) ಪೊಲೀಸರು ಬಂಧಿಸಿದ್ದಾರೆ.
ಬಂಧಿತ ಆರೋಪಿಯನ್ನು ಜಯನಗರ ನಿವಾಸಿ ಶ್ರೀಕೃಷ್ಣ ಅಲಿಯಾಸ್ ಶ್ರೀಕಿ (26) ಎಂದು ಗುರುತಿಸಲಾಗಿದೆ.
ಬಹಳ ವರ್ಷಗಳಿಂದ ಹ್ಯಾಕಿಂಗ್ ಮಾಡುವುದನ್ನೇ ವೃತ್ತಿಯನ್ನಾಗಿಸಿಕೊಂಡು ದಂಧೆ ನಡೆಸುತ್ತಿದ್ದ ಆರೋಪಿಯನ್ನು ಹೆಚ್ಚಿನ ವಿಚಾರಣೆಗಾಗಿ 14 ದಿನಗಳ ಕಾಲವಶಕ್ಕೆ ಪಡೆಯಲಾಗಿದೆ.
ಇನ್ನು ಈತ ಅಂತಾರಾಷ್ಟ್ರೀಯ ಡ್ರಗ್ಸ್ ದಂಧೆಯಲ್ಲೂ ತೊಡಗಿದ್ದು, ಕೆಲ ದಿನಗಳ ಹಿಂದೆ ದಕ್ಷಿಣ ವಿಭಾಗ ಮತ್ತು ಸಿಸಿಬಿ ಪೊಲೀಸರ ಜಂಟಿ ಕಾರ್ಯಾಚರಣೆಯಲ್ಲಿ ಬಂಧನಕ್ಕೊಳಗಾದ ಮಾಜಿ ಸಚಿವ ರುದ್ರಪ್ಪ ಲಮಾಣಿ ಪುತ್ರ ದರ್ಶನ್ ಲಮಾಣಿ ಮತ್ತು ಇತರೆ ಎಂಟು ಮಂದಿಯ ಆರೋಪಿಗಳ ಜತೆ ಶ್ರೀಕಿ ನಿಕಟ ಸಂಪರ್ಕ ಹೊಂದಿದ್ದಾನೆ ಎಂದು ತನಿಖೆಯಲ್ಲಿ ಬೆಳಕಿಗೆ ಬಂದಿದೆ.