ಫಿಲಿಬಿಟ್, ನ.19 (DaijiworldNews/HR): ಅಕ್ಟೋಬರ್ 09 ರಂದು 17 ವರ್ಷದ ಬಾಲಕಿಯ ಮೇಲೆ ಉತ್ತರ ಪ್ರದೇಶದ ಫಿಲಿಬಿಟ್ ನಲ್ಲಿ ನಡೆದಿದ್ದ ಅತ್ಯಾಚಾರ ಪ್ರಕರಣದಲ್ಲಿ ನಾಲ್ವರ ವಿರುದ್ಧ ಫೋಸ್ಕೋ ಕಾಯ್ದೆಯ ಅಡಿಯಲ್ಲಿ ಪ್ರಕರಣ ದಾಖಲಾಗಿದ್ದು, ಬಂಧಿಸಲಾಗಿದೆ.
ನಾಲ್ವರು ಸಹೋದರರು ಬಾಲಕಿಯ ಮನೆಗೆ ನುಗ್ಗಿ ಆಕೆಯ ಮೇಲೆ ಅತ್ಯಾಚಾರವೆಸಗಿ ಬಳಿಕ ಘಟನೆಯನ್ನು ಮೊಬೈಲ್ ನಲ್ಲಿ ಚಿತ್ರೀಕರಿಸಿದ್ದರು, ಆಗ ಯುವತಿ ಕಿರುಚಿಕೊಂಡಿದ್ದು ತಕ್ಷಣವೇ ಸ್ಥಳೀಯರು ಘಟನಾ ಸ್ಥಳಕ್ಕೆ ಧಾವಿಸಿದ್ದು ಆರೋಪಿಗಳು ಪರಾರಿಯಾಗಿದ್ದಾರೆ.
ಇನ್ನು ಈ ಘಟನೆಯ ಕುರಿತು ಪೊಲೀಸರಿಗೆ ದೂರು ನೀಡಿದ್ದಲ್ಲಿ ವಿಡಿಯೋವನ್ನು ಸಾಮಾಜಿಕ ಜಾಲತಾಣಗಳಲ್ಲಿ ಅಪ್ ಲೋಡ್ ಮಾಡುವುದಾಗಿ ಆರೋಪಿಗಳು ಬೆದರಿಕೆಯೊಡ್ಡಿದ್ದಾರೆ.
ಸಂತ್ರಸ್ತ ಬಾಲಕಿಯ ತಂದೆ ಪೊಲೀಸ್ ಠಾಣೆಗೆ ದೂರು ನೀಡಿದ್ದರು ಯಾವುದೇ ಕ್ರಮ ಕೈಗೊಳ್ಳದ ಕಾರಣ ನ್ಯಾಯಕ್ಕಾಗಿ ಬಾಲಕಿ ಹಾಗೂ ಆಕೆಯ ಕುಟುಂಬ ಸದಸ್ಯರು ಕೋರ್ಟ್ ಮೊರೆ ಹೋಗಿದ್ದು, ಈ ಬಳಿಕ ಆರೋಪಿಗಳ ವಿರುದ್ಧ ಪ್ರಕರಣ ದಾಖಲಾಗಿದೆ.