ಮುಂಬೈ, ನ. 19 (DaijiworldNews/MB) : ಚಾಲಕ ಹಾಗೂ ಇತರೆ ಇಬ್ಬರು ಸಿಬ್ಬಂದಿಗಳಿಗೆ ಕೊರೊನಾ ಸೋಂಕು ದೃಢಪಟ್ಟ ಕಾರಣದಿಂದಾಗಿ ಬಾಲಿವುಡ್ ನಟ ಸಲ್ಮಾನ್ ಖಾನ್ ಅವರು ಕ್ವಾರಂಟೈನ್ಗೆ ಒಳಗಾಗಿದ್ದಾರೆ ಎಂದು ವರದಿ ತಿಳಿಸಿದೆ.
ಸೋಂಕು ದೃಢಪಟ್ಟ ಸಲ್ಮಾನ್ ಖಾನ್ ಅವರ ಚಾಲಕ ಹಾಗೂ ಇತರೆ ಸಿಬ್ಬಂದಿಗಳು ಬಾಂಬೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಮುಂಜಾಗ್ರತಾ ಕ್ರಮವಾಗಿ ಸಲ್ಮಾನ್ ಖಾನ್ ಹೋಂ ಕ್ವಾರಂಟೈನ್ಗೆ ಒಳಗಾಗಿದ್ದಾರೆ. ಅವರ ಕುಟುಂಬ ಸದಸ್ಯರೂ ಕೂಡಾ ಕ್ವಾರಂಟೈನ್ಗೆ ಒಳಗಾಗಲು ನಿರ್ಧರಿಸಿದ್ದಾರೆ ಎಂದು ವರದಿಯಾಗಿದೆ.
ಹಿಂದಿ ಆವೃತ್ತಿಯ ಬಿಗ್ ಬಾಸ್ 14 ರಿಯಾಲಿಟಿ ಶೋ ವನ್ನು ಸಲ್ಮಾನ್ ಖಾನ್ ಅವರು ನಡೆಸಿಕೊಡುತ್ತಿದ್ದು ವಾರಾಂತ್ಯದಲ್ಲಿ ಸ್ಪಂರ್ಧಿಗಳ ಜೊತೆ ಮಾತುಕತೆ ನಡೆಸುತ್ತಿದ್ದರು. ಈಗ ಕ್ವಾರಂಟೈನ್ನಲ್ಲಿ ಇರುವ ಕಾರಣ ಕಾರ್ಯಕ್ರಮ ಯಾವ ರೀತಿ ನಡೆಯಲಿದೆ ಎಂದು ಇನ್ನಷ್ಟೇ ತಿಳಿದು ಬರಬೇಕಾಗಿದೆ.