ಪಶ್ಚಿಮ ಬಂಗಾಳ,ನ.19 (DaijiworldNews/HR): ಮಾಲ್ಡಾ ಜಿಲ್ಲೆಯಲ್ಲಿ ಪ್ಲಾಸ್ಟಿಕ್ ಕಾರ್ಖಾನೆಯೊಂದರಲ್ಲಿ ಸ್ಫೋಟ ಸಂಭವಿಸಿ ಐದು ಜನ ಸಾವನ್ನಪ್ಪಿ, ಅನೇಕ ಮಂದಿ ಗಾಯಗೊಂಡಿರುವ ಘಟನೆ ನಡೆದಿದೆ.
ಸಾಂಧರ್ಭಿಕ ಚಿತ್ರ
ಘಟನೆಯಲ್ಲಿ ಗಂಭೀರ ಗಾಯಗೊಂಡವರನ್ನು ಮಾಲ್ಡಾದಲ್ಲಿರುವ ಆಸ್ಪತ್ರೆಗೆ ದಾಖಲಿಸಲಾಗಿದೆ.
ಪ್ಲಾಸ್ಟಿಕ್ ಕಾರ್ಖಾನೆಯಲ್ಲಿ ಸಂಭವಿಸಿದ ಸ್ಪೋಟ ತಾಂತ್ರಿಕ ದೋಷದಿಂದಾಗಿರಬಹುದೆಂದು ಎಂದು ಮೇಲ್ನೋಟಕ್ಕೆ ಕಂಡುಬಂದಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
ಸ್ಪೋಟಕ್ಕೆ ನಿಖರ ಕಾರಣ ಇನ್ನಷ್ಟೇ ತಿಳಿದುಬರಬೇಕಾಗಿದೆ, ಅಗ್ನಿಶಾಮಕ ದಳದಿಂದ ಬೆಂಕಿ ನಂದಿಸುವ ಕಾರ್ಯ ನಡೆಯುತ್ತಿದೆ ಎಂದು ತಿಳಿದು ಬಂದಿದೆ.