ನವದೆಹಲಿ, ನ. 19 (DaijiworldNews/MB) : ಏಷ್ಯಾದ ಮೂರನೇ ಅತಿ ದೊಡ್ಡ ರಾಷ್ಟ್ರವಾಗಿರುವ ಭಾರತ ಏಷ್ಯಾದ ಬಲಿಷ್ಠ ರಾಷ್ಟ್ರಗಳ 'ಆರ್ಸಿಇಪಿ' ಒಕ್ಕೂಟದಿಂದ ಹೊರಕ್ಕೆ ಬಂದ ವಿಚಾರದಲ್ಲಿ ದೇಶೀಯ ಮಾರಾಟ ಮತ್ತು ರಾಜತಾಂತ್ರಿಕ ವಲಯಗಳಲ್ಲಿ ತೀವ್ರ ಟೀಕೆ ವ್ಯಕ್ತವಾಗಿದ್ದು ಈ ವಿಚಾರವಾಗಿ ವಿದೇಶಾಂಗ ವ್ಯವಹಾರಗಳ ಸಚಿವ ಎಸ್.ಜೈಶಂಕರ್ ಸ್ಪಷ್ಟನೆ ನೀಡಿದ್ದಾರೆ.
''ಭಾರತದ ಮೇಲೆ ವ್ಯತಿರಿಕ್ತ ಪರಿಣಾಮ ಬೀರುವ ಸಾಧ್ಯತೆ ಇರುವ ನಿಟ್ಟಿನಲ್ಲಿ ಪ್ರಾದೇಶಿಕ ಸಮಗ್ರ ಆರ್ಥಿಕ ಪಾಲುದಾರಿಕೆ (ಆರ್ಸಿಇಪಿ) ಯಿಂದ ನಾವು ಹೊರ ಬಂದಿದ್ದೇವೆ. ಪ್ರಸ್ತುತ ಪರಿಸ್ಥಿತಿಯಲ್ಲಿ ಈ ಒಪ್ಪಂದದಿಂದಾಗಿ ನಮಗೆ ಋಣಾತ್ಮಕ ಪರಿಣಾಮ ಬೀರಳಿದೆ ಎಂಬ ಕಾರಣದಿಂದಾಗಿ ಈ ನಿರ್ಧಾರವನ್ನು ನಾವು ಕೈಗೊಂಡಿದ್ದೇವೆ'' ಎಂದು ವಿದೇಶಾಂಗ ವ್ಯವಹಾರಗಳ ಸಚಿವರು ತಿಳಿಸಿದ್ದಾರೆ.
''ಈ ಒಪ್ಪಂದದಲ್ಲಿ ಹಲವು ಪ್ರಮುಖ ಅಂಶಗಳ ಮೇಲೆ ಗಮನ ಹರಿಸಿಲ್ಲ ಎಂಬುದು ನಮ್ಮ ಗಮನಕ್ಕೆ ಬಂದಿದೆ. ಸಹಿ ಹಾಕುವ ಮುನ್ನ ಎಲ್ಲಾ ಆಯಾಮದಿಂದ ಚಿಂತನೆ ನಡೆಸಬೇಕಿತ್ತು'' ಎಂದು ಹೇಳಿದ್ದಾರೆ.