ಬಳ್ಳಾರಿ,ನ.19 (DaijiworldNews/HR): ಬಲವಂತದಿಂದ ಬಳ್ಳಾರಿ ಬಂದ್ ಮಾಡಿದರೇ ಕಾನೂನಿನ ಕ್ರಮ ಕೈಗೊಳ್ಳಲಾಗುವುದು ಎಂದು ಅರಣ್ಯ, ಪರಿಸರ, ಜೀವಿಶಾಸ್ತ್ರ ಹಾಗೂ ಬಳ್ಳಾರಿ ಜಿಲ್ಲಾ ಉಸ್ತುವಾರಿ ಸಚಿವ ಆನಂದಸಿಂಗ್ ಹೇಳಿದ್ದಾರೆ.
ಈ ಕುರಿತು ಮಾತನಾಡಿದ ಅವರು, ವಿಜಯನಗರ ಜಿಲ್ಲೆ ರಚನೆ ವಿರೋಧಿಸಿ ವಿವಿಧ ಸಂಘಟನೆಗಳು ನ. 26ರಂದು ಬಳ್ಳಾರಿ ಬಂದ್ ಕರೆ ನೀಡಿದ್ದು, ಆ ಸಂಧರ್ಭದಲಿ ಯಾವುದೇ ರೀತಿಯ ಬಲವಂತದ ಮತ್ತು ಜನರಿಗೆ ತೊಂದರೆಯಾಗುವಂತೆ ಹೋರಾಟ ಮತ್ತು ಬಂದ್ ಮಾಡಿದರೇ ಕ್ರಮಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.
ಇನ್ನು ವಿಜಯನಗರ ಜಿಲ್ಲೆಯ ಕೂಗು ಇಂದು ನಿನ್ನೆಯದಲ್ಲ, ಇದು ಬಹಳದಿನಗಳಿಂದ ಇತ್ತು. ಬಳ್ಳಾರಿ ಜಿಲ್ಲೆಯ ಪಶ್ಚಿಮ ತಾಲೂಕುಗಳ ಬಹುದಿನಗಳ ಬೇಡಿಕೆಗೆ ಸರಕಾರ ಸ್ಪಂದಿಸಿದೆ ಎಂದು ಹೇಳಿದ್ದಾರೆ.