ಬೆಂಗಳೂರು, ನ.19 (DaijiworldNews/HR): ಅಕ್ಟೋಬರ್ 8 ರಂದು ಸರ್ಕಾರ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿಗಳ ಅಧ್ಯಕ್ಷ, ಉಪಾಧ್ಯಕ್ಷರ ಮೀಸಲಾತಿ ನಿಗದಿಪಡಿಸಿ ಹೊರಡಿಸಿದ್ದ ಆದೇಶವನ್ನು ಹೈಕೋರ್ಟ್ ರದ್ದುಗೊಳಿಸಿದೆ.
ಇಂದು ಹೈಕೋರ್ಟ್ ನ ಏಕಸದಸ್ಯ ಪೀಠ ತೀರ್ಪು ನೀಡಿದ್ದು, ಮೇಲ್ಮನವಿ ಸಲ್ಲಿಸಲು ಸರ್ಕಾರಕ್ಕೆ ಹತ್ತು ದಿನಗಳ ಅವಕಾಶ ನೀಡಿದೆ.
ಇನ್ನು ಕರ್ನಾಟಕದ ಒಟ್ಟು 277 ಸ್ಥಳೀಯ ಸಂಸ್ಥೆಗಳ ಅಧ್ಯಕ್ಷ - ಉಪಾಧ್ಯಕ್ಷ ಚುನಾವಣೆಗೆ ಮೀಸಲಾತಿ ಅಧಿಸೂಚನೆ ಹೊರಡಿಸಲಾಗಿತ್ತು.
ಕೋರ್ಟ್ ಆದೇಶದ ವಿರುದ್ಧ ಮೇಲ್ಮನವಿ ಸಲ್ಲಿಸಲು ಸರ್ಕಾರ ಅವಕಾಶ ಕೋರಿದ್ದು,ಕೋರ್ಟ್ ಮೇಲ್ಮನವಿ ಸಲ್ಲಿಸಲು ಇಂದಿನಿಂದ ಹತ್ತು ದಿನಗಳ ಕಾಲ ಅವಕಾಶ ನೀಡಿದೆ. ಮೇಲ್ಮನವಿ ಸಲ್ಲಿಸಿದರೆ ಆಗ ಹೈಕೋರ್ಟ್ ನ ವಿಭಾಗೀಯ ಪೀಠ ನೀಡುವ ತೀರ್ಪು ಅಂತಿಮವಾಗಿರಲಿದೆ ಎಂದು ಕೋರ್ಟ್ ಸೂಚಿಸಿದೆ.