ನವದೆಹಲಿ, ನ. 19 (DaijiworldNews/SM): ಕೇಂದ್ರ ಸಚಿವ ಹಾಗೂ ಕರ್ನಾಟಕದ ಮಾಜಿ ಸಿಎಂ ಸಿಎಂ ಡಿ.ವಿ. ಸದಾನಂದ ಗೌಡರಿಗೆ ಕೊರೋನಾ ಪಾಸಿಟಿವ್ ದೃಢಪಟ್ಟಿದೆ. ಈ ಬಗ್ಗೆ ತಮ್ಮ ಟ್ವೀಟರ್ ಖಾತೆಯಲ್ಲಿ ಅವರು ಸ್ಪಷ್ಟಪಡಿಸಿದ್ದಾರೆ.
ಕೊರೋನಾ ಸೋಂಕಿನ ಆರಂಭಿಕ ಲಕ್ಷಣಗಳು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ತಕ್ಷಣ ಸದಾನಂದ ಗೌಡ ಅವರು ಕೋವಿಡ್ ಪರೀಕ್ಷೆಗೊಳಪಟ್ಟಿದ್ದಾರೆ. ಈ ಸಂದರ್ಭದಲ್ಲಿ ಅವರಲ್ಲಿ ಸೋಂಕು ಇರುವುದು ದೃಢಪಟ್ಟಿದೆ. ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ಪ್ರಸ್ತುತ ನಾನು ಕ್ವಾರಂಟೈನ್ ನಲ್ಲಿದ್ದೇನೆ. ನನ್ನ ಸಂಪರ್ಕಕ್ಕೆ ಬಂದವರೆಲ್ಲರೂ, ಎಚ್ಚರಿಕೆಯಿಂದಿರಲು ಮನವಿ ಮಾಡಿಕೊಂಡಿದ್ದಾರೆ.