ದಾವಣಗೆರೆ,ನ.20 (DaijiworldNews/HR): ಕೊರೊನಾ ಕಾರಣದಿಂದ ಮುಚ್ಚಲಾಗಿದ್ದ ಶಾಲೆಗಳನ್ನು ಮಕ್ಕಳ ಯೋಗಕ್ಷೇಮ, ಭವಿಷ್ಯ ಎರಡನ್ನೂ ಮನಸ್ಸಲ್ಲಿ ಇಟ್ಟುಕೊಂಡು ಆರಂಭಿಸಬೇಕಾ ಅಥವಾ ಬೇಡ ಎಂದು ಶೀಘ್ರದಲ್ಲಿ ನಿರ್ಧಾರ ಕೈಗೊಳ್ಳಲಾಗುವುದು ಎಂದು ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಹೇಳಿದ್ದಾರೆ.
ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, "ಎಲ್ಲ ಶಾಲಾಭಿವೃದ್ಧಿ ಸಮಿತಿಯವರು, ಮುಖ್ಯಶಿಕ್ಷಕರು ಹಾಗೂ ಪೋಷಕರ ಅಭಿಪ್ರಾಯ ಸಂಗ್ರಹಿಸಿದ್ದೇವೆ. ಮುಖ್ಯಮಂತ್ರಿ ಜತೆಗೆ ಚರ್ಚಿಸಿ ಮಕ್ಕಳ ಆರೋಗ್ಯವನ್ನೂ ದೃಷ್ಟಿಯಲ್ಲಿಟ್ಟುಕೊಂಡು ಕ್ರಮ ಕೈಗೊಳ್ಳುತ್ತೇವೆ" ಎಂದರು.
ಇನ್ನು ಮಕ್ಕಳಿಗೆ ಶಾಲೆಗೆ ಬಂದ ಮೇಲೆ ಯಾವುದೇ ರೀತಿಯ ತೊಂದರೆಯಾಗಬಾರದು, ಅವರ ಆರೋಗ್ಯವನ್ನು ಗಮದಲ್ಲಿಟ್ಟುಕೊಂಡು ಶೀಘ್ರದಲ್ಲಿಯೇ ನಿರ್ಧಾರವನ್ನು ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ.