ಮುಂಬೈ, ನ.20 (DaijiworldNews/PY): ಸಿಬಿಐ ತನಿಖೆಗೆ ರಾಜ್ಯ ಸರ್ಕಾರದ ಒಪ್ಪಿಗೆ ಕಡ್ಡಾಯವಾಗಿದೆ ಎಂಬ ಸುಪ್ರೀಂಕೋರ್ಟ್ ತೀರ್ಪನ್ನು ಸ್ವಾಗತಿಸಿದ ಮಹಾರಾಷ್ಟ್ರ ಸಚಿವ ಅಸ್ಲಂ ಶೇಕ್ ಅವರು, "ಸಿಬಿಐ ಬಿಜೆಪಿ ಸರ್ಕಾರ ಅಧೀನದಲ್ಲಿರುವ ಪಾನ್ ಶಾಪ್ನಂತೆ ಮಾರ್ಪಟ್ಟಿದೆ" ಎಂದು ಹೇಳಿದ್ದಾರೆ.
"ಬಿಜೆಪಿಯೇತರ ಸರ್ಕಾರ ಇರುವ ರಾಜ್ಯಗಳ ಮುಖ್ಯಮಂತ್ರಿಗಳ ಹಾಗೂ ಸಚಿವರ ವಿರುದ್ದ ಕ್ರಮ ಕೈಗೊಳ್ಳಲಾಗುತ್ತದೆ" ಎಂದಿದ್ದಾರೆ.
ರಾಜ್ಯ ಸರ್ಕಾರಗಳ ಒಪ್ಪಿಗೆ ಇಲ್ಲದೇ ಸಿಬಿಐ ತನಿಖೆ ಮಾಡುವಂತಿಲ್ಲ ಎಂದು ಸುಪ್ರೀಂಕೋರ್ಟ್ ನ್ಯಾಯಪೀಠಕ್ಕೆ ಹೇಳಿದೆ.
ಸುಪ್ರೀಂಕೋರ್ಟ್ ತೀರ್ಪನ್ನು ಮಹಾರಾಷ್ಟ್ರ ಗೃಹ ಸಚಿವ ಅನಿಲ್ ದೇಶ್ಮುಖ್ ಕೂಡಾ ಸ್ವಾಗತಿಸಿದ್ದು, "ಯಾವುದೇ ತನಿಖೆ ನಡೆಸಲು ಸಿಬಿಐಗೆ ರಾಜ್ಯಗಳ ಅನುಮತಿ ಬೇಕು" ಎಂದು ಹೇಳಿದ್ದಾರೆ.