ಬೆಂಗಳೂರು,ನ.20 (DaijiworldNews/HR): ಕನ್ನಡ ಪರ ಸಂಘಟನೆಗಳು ಮರಾಠ ಅಭಿವೃದ್ಧಿ ನಿಗಮ ರಚನೆ ಖಂಡಿಸಿ ಡಿಸೆಂಬರ್ 5ರಂದು ಕರ್ನಾಟಕ ಬಂದ್ ಮಾಡಲು ನಿರ್ಧರಿಸಿದೆ.
ಕನ್ನಡ ಪರ ಸಂಘಟನೆಗಳ ಸಭೆ ವಾಟಾಳ್ ನಾಗರಾಜ್ ನೇತೃತ್ವದಲ್ಲಿ ನಡೆದಿದ್ದು ಆ ಸಭೆಯಲ್ಲಿ ಬಂದ್ ಮಾಡುವ ಬಗ್ಗೆ ನಿರ್ಧಾರಕ್ಕೆ ಬರಲಾಗಿದೆ.
ಡಿಸೆಂಬರ್ 5ರಂದು ಬೆಳಿಗ್ಗೆ 6ರಿಂದ ಸಂಜೆ 6 ರವರೆಗೆ ಬಂದ್ ನಡೆಯಲಿದೆ ಎಂದು ತಿಳಿದು ಬಂದಿದೆ.
ಮುಖ್ಯಮಂತ್ರಿ ಯಡಿಯೂರಪ್ಪ ನೇತೃತ್ವದ ರಾಜ್ಯ ಸರ್ಕಾರ ಇತ್ತೀಚೆಗೆ ಮರಾಠ ಅಭಿವೃದ್ಧಿ ನಿಗಮ ರಚಿಸಿತ್ತು. ಆದರೆ ಇದಕ್ಕೆ ವಿರೋಧಗಳು ಎದುರಾಗಿಗುತ್ತಿದ್ದು, ಇದೀಗ ರಾಜ್ಯ ಸರ್ಕಾರ ಮರಾಠಿಗರಿಗೆ ನೆರವು ನೀಡುತ್ತಿದೆ ಎಂದು ಕನ್ನಡ ಪರ ಸಂಘಟನೆಗಳು ವಿರೋಧ ವ್ಯಕ್ತಪಡಿಸಿದ್ದವು.