ಲಕ್ನೋ,ನ.20 (DaijiworldNews/HR): ಉತ್ತರ ಪ್ರದೇಶದಲ್ಲಿ ಲವ್ ಜಿಹಾದ್ ವಿರುದ್ಧದ ಕಠಿಣ ಕಾನೂನನ್ನು ಶೀಘ್ರದಲ್ಲೇ ತರವ ವಿಚಾರವಾಗಿ ಉತ್ತರ ಪ್ರದೇಶದ ಗೃಹ ಇಲಾಖೆಯು ಅಲ್ಲಿನ ಕಾನೂನು ಇಲಾಖೆಗೆ ಪ್ರಸ್ತಾವನೆ ಕಳುಹಿಸಿದೆ ಎಂದು ಹೇಳಿದೆ.
ಮಧ್ಯಪ್ರದೇಶದ ಬಿಜೆಪಿ ನೇತೃತ್ವದ ಸರ್ಕಾರ ಲವ್ ಜಿಹಾದ್ ಪ್ರಕರಣಗಳ ಕಡಿವಾಣಕ್ಕೆ ಕಾಯ್ದೆ ರೂಪಿಸಲು ತೀರ್ಮಾನಿಸಿತ್ತು.
ಇನ್ನು ಈ ಹಿಂದೆ ಕರ್ನಾಟಕದಲ್ಲಿ ಕೂಡ ಲವ್ ಜಿಹಾದ್ ಹೆಸರಿನಲ್ಲಿ ನಡೆಯುವ ಮತಾಂತರ ತಡೆಗೆ ಪ್ರಬಲ ಕಾನೂನು ರೂಪಿಸಲು ಬಿಜೆಪಿ ಕೋರ್ ಕಮಿಟಿಯು ಒಪ್ಪಿಗೆ ನೀಡಿತ್ತು.