ಶ್ರೀನಗರ, ನ.21 (DaijiworldNews/PY): "ಜಮ್ಮು-ಕಾಶ್ಮೀರದ ರಜೌರಿ ಜಿಲ್ಲೆಯ ನೌಶೆರಾ ವಲಯದಲ್ಲಿ ಪಾಕ್ ಸೈನ್ಯ ಕದ ವಿರಾಮ ಉಲ್ಲಂಘಿಸಿ ಗುಂಡಿನ ದಾಳಿ ನಡೆಸಿದ್ದು, ಭಾರತೀಯ ಯೋಧರೋರ್ವರು ಹುತಾತ್ಮರಾಗಿದ್ದಾರೆ" ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಸಾಂದರ್ಭಿಕ ಚಿತ್ರ
"ನೌಶೇರಾ ಸೆಕ್ಟರ್ನ ಲ್ಯಾಮ್ ಪ್ರದೇಶದಕ್ಕಿ ಗಡಿಯುದ್ದಕ್ಕೂ ಅಪ್ರಚೋದಿತ ಗುಂಡಿನ ದಾಳಿ ನಡೆಸಿದ್ದು, ಯೋಧರೋರ್ವರಿಗೆ ಗಂಭೀರ ಗಾಯಗಳಾಗಿದ್ದು, ಬಳಿಕ ಮೃತಪಟ್ಟಿದ್ದಾರೆ" ಎಂದು ಅಧಿಕಾರಿಗಳು ಹೇಳಿದ್ದಾರೆ.
"ಪಾಕ್ ನ ದಾಳಿ ಭಾರತೀಯ ಸೇನೆಯೂ ಕೂಡಾ ಪ್ರತಿ ದಾಳಿ ನಡೆಸಿದ್ದು, ಎರಡೂ ಕಡೆಯವರ ನಡುವೆ ಸ್ವಲ್ಪ ಸಮಯದವರೆಗೆ ಗುಂಡಿನ ದಾಳಿ ನಡೆದಿದೆ" ಎಂದು ತಿಳಿಸಿದ್ದಾರೆ.
ಜಮ್ಮು ಕಾಶ್ಮೀರದಲ್ಲಿ ನ.13ರ ಶುಕ್ರವಾರ ಪಾಕಿಸ್ತಾನ ಪಡೆಯ ಅಪ್ರಚೋದಿತ ದಾಳಿಯಿಂದಾಗಿ ಐವರು ಯೋಧರು ಸೇರಿದಂತೆ 11 ಮಂದಿ ಹುತಾತ್ಮರಾಗಿದ್ದು, ಈ ವೇಳೆ ಭಾರತ ಸೇನೆಯು ಪ್ರತಿದಾಳಿ ನಡೆಸಿದ್ದು, 11 ಮಂದಿ ಪಾಕ್ ಸೈನಿಕರು ಸಾವನ್ನಪ್ಪಿದ್ದಾರೆ. ಈ ಘಟನೆಯ ಬಗ್ಗೆ ಪಾಕ್ನಲ್ಲಿರುವ ಭಾರತೀಯ ರಾಯಭಾರಿಗೆ ಪಾಕಿಸ್ತಾನ ಸಮನ್ಸ್ ನೀಡಿದ್ದು, ಇದಕ್ಕೆ ಪ್ರತಿಯಾಗಿ ಭಾರತೀಯ ವಿದೇಶಾಂಗ ಸಚಿವಾಲಯವು ಕೂಡಾ ಸಮನ್ಸ್ ಜಾರಿ ಮಾಡಿದೆ.