ನವದೆಹಲಿ, ನ. 21 (DaijiworldNews/MB) : ನಗ್ರೋಟಾದಲ್ಲಿ ನಾಲ್ವರು ಉಗ್ರರನ್ನು ಹತ್ಯೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿ ಭಾರತವು ಪಾಕಿಸ್ತಾನ ರಾಯಭಾರಿಗೆ ಸಮನ್ಸ್ ಜಾರಿಗೊಳಿಸಿದೆ ಎಂದು ವರದಿಯಾಗಿದೆ.
ಪಾಕಿಸ್ತಾನ ಕೂಡಲೇ ತನ್ನ ನೆಲದಲ್ಲಿ ಕಾರ್ಯನಿರ್ವಹಿಸುತ್ತಿರುವ ಉಗ್ರರಿಗೆ ಬೆಂಬಲ ನೀಡುವುದನ್ನು ನಿಲ್ಲಿಸಬೇಕು ಎಂದು ಆಗ್ರಹಿಸಿದೆ.
ಭಾರತ ಸರ್ಕಾರ ಎಲ್ಲಾ ಭದ್ರತೆಯನ್ನು ಕಾಪಾಡುವ ನಿಟ್ಟಿನಲ್ಲಿ ಎಲ್ಲಾ ಅಗತ್ಯ ಕ್ರಮಗಳನ್ನು ಕೈಗೊಂಡಿದೆ ಎಂದು ಭಾರತ ತಿಳಿಸಿದೆ.
ಜಮ್ಮು ಮತ್ತು ಕಾಶ್ಮೀರದಲ್ಲಿ ಪಾಕಿಸ್ತಾನ ಮೂಲಕ ಜೈಷ್-ಇ-ಮೊಹಮ್ಮದ್ ಉಗ್ರ ಸಂಘಟನೆ ಯೋಜಿಸಿರುವ ಭಯೋತ್ಪಾದಕ ದಾಳಿಯ ಬಗ್ಗೆ ಭಾರತ ತೀವ್ರ ಕಳವಳ ವ್ಯಕ್ತಪಡಿಸಿದೆ.
ಕಾಶ್ಮೀರದ ಜಿಲ್ಲಾ ಅಭಿವೃದ್ಧಿ ಮಂಡಳಿ ಚುನಾವಣೆ ಸಂದರ್ಭ ದಾಳಿ ನಡೆಸಲು ನಾಲ್ವರು ಜೈಷ್-ಇ-ಮೊಹಮ್ಮದ್ ಉಗ್ರರು ಸಂಚು ಹೂಡಿದ್ದರು. ಈ ಉಗ್ರರನ್ನು ಸಿಆರ್ಪಿಎಫ್ ಯೋಧರು ಎನ್ಕೌಂಟರ್ನಲ್ಲಿ ಹತ್ಯೆ ಮಾಡಿದ್ದರು.