ಚಿಕ್ಕಮಗಳೂರು, ನ.21 (DaijiworldNews/PY): ಮೂಡಿಗೆರೆ ಕ್ಷೇತ್ರದ ಶಾಸಕ ಎಂ.ಪಿ.ಕುಮಾರಸ್ವಾಮಿ ಅವರು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರನ್ನು ಭೇಟಿ ಮಾಡಿದ್ದು, ಮಾತುಕತೆ ನಡೆಸಿದ್ದಾರೆ.
ನಾನು ಕೂಡಾ ಸಚಿವ ಸ್ಥಾನದ ಆಕಾಂಕ್ಷಿಯಾಗಿದ್ದು, ತಮಗೂ ಮಂತ್ರಿ ಪದವಿ ನೀಡುಂತೆ ನಳಿನ್ ಕುಮಾರ್ ಕಟೀಲ್ ಅವರಲ್ಲಿ ಎಂ.ಪಿ.ಕುಮಾರಸ್ವಾಮಿ ಅವರು ಕೋರಿದ್ದಾರೆ.
ತಾನು ಸಚಿವ ಸ್ಥಾನದ ಆಕಾಂಕ್ಷಿ ಎಂದು ಎಂ.ಪಿ.ಕುಮಾರಸ್ವಾಮಿ ಅವರು ಹೇಳಿಕೊಂಡಿದ್ದು, ಇದರ ಬೆನ್ನಲ್ಲೇ ನಳಿನ್ ಕುಮಾರ್ ಕಟೀಲ್ ಅವರನ್ನು ಭೇಟಿ ಮಾಡಿ ಮನವಿ ಮಾಡಿದ್ದಾರೆ.