ಮುಂಬೈ,ನ.21 (DaijiworldNews/HR): ದೆಹಲಿಯಲ್ಲಿ ಕೊರೊನಾ ಸೋಂಕು ದಿನೇ ದಿನೇ ಹೆಚ್ಚುತ್ತಿರುವ ಕಾರಣದಿಂದಾಗಿ ದೆಹಲಿ-ಮುಂಬೈ ನಡುವಿನ ರೈಲು ಮತ್ತು ವಿಮಾನ ಸಂಚಾರವನ್ನು ಸ್ಥಗಿತಗೊಳಿಸಲು ಮಹಾರಾಷ್ಟ್ರ ಸರ್ಕಾರ ಚಿಂತನೆ ನಡೆಸುತ್ತಿದೆ ಎಂದು ಸರ್ಕಾರದ ಪ್ರಧಾನ ಕಾರ್ಯದರ್ಶಿ ಸಂಜಯ್ ಕುಮಾರ್ ಹೇಳಿದ್ದಾರೆ.
ದೆಹಲಿ-ಮುಂಬೈ ನಡುವಿನ ರೈಲು ಮತ್ತು ವಿಮಾನ ಸಂಚಾರವನ್ನು ಸ್ಥಗಿತಗೊಳಿಸುವುದರಿಂದ ಕೊರೊನಾ ಸೋಂಕನ್ನು ನಿಯಂತ್ರಿಸಬಹುದೆಂಬ ಉದ್ದೇಶದಿಂದ ಈ ನಿರ್ಧಾರ ತೆಗೆದುಕೊಳ್ಳಲು ಸರ್ಕಾರ ಚಿಂತನೆ ನಡೆಸುತ್ತಿದೆ , ಆದರೆ ಇನ್ನೂ ಈ ಬಗ್ಗೆ ಅಂತಿಮ ನಿರ್ಧಾರ ತೆಗೆದುಕೊಂಡಿಲ್ಲ ಎಂದು ಹೇಳಿದ್ದಾರೆ.
ಇನ್ನು ಮಹಾರಾಷ್ಟ್ರದಲ್ಲಿ ಶುಕ್ರವಾರದ ವೇಳೆಗೆ 1,76,8695 ಕೊರೊನಾ ಪ್ರಕರಣಗಳು ದಾಖಲಾಗಿದ್ದು, ಒಂದು ದಿನದಲ್ಲಿ 5640 ಪ್ರಕರಣಗಳು ಪತ್ತೆಯಾಗಿ, ಸಾವಿನ ಪ್ರಮಾಣ 46511ಕ್ಕೆ ಏರಿದೆ. ಜೊತೆಗೆ ದೆಹಲಿಯಲ್ಲಿ ಶುಕ್ರವಾರ 6,608 ಹೊಸ ಪ್ರಕರಣಗಳು ಪತ್ತೆಯಾಗುತ್ತಿದ್ದು, ಸೋಂಕಿತರ ಸಂಖ್ಯೆ 5.17 ಲಕ್ಷ ದಾಟಿದೆ ಎಂದು ತಿಳಿದು ಬಂದಿದೆ.