ನವದೆಹಲಿ,ನ.21 (DaijiworldNews/HR): ವಿಚಾರಣೆಯ ಬಳಿಕ ಖ್ಯಾತ ಹಾಸ್ಯನಟಿ ಭಾರ್ತಿ ಸಿಂಗ್ ಅವರನ್ನು ಎನ್ ಸಿಬಿ ಅಧಿಕಾರಿಗಳು ಬಂಧಿಸಿದ್ದು, ಅವರ ನಿವಾಸದಲ್ಲಿದ್ದ ಡ್ರಗ್ಸ್ ವಶಕ್ಕೆ ಪಡೆದಿದ್ದಾರೆ.
ಭಾರ್ತಿ ಸಿಂಗ್ ಅವರನ್ನು ನಾಳೆ ನ್ಯಾಯಾಲಯಕ್ಕೆ ಹಾಜರುಪಡಿಸಲಿದ್ದು, ಇಂದು ರಾತ್ರಿ ಎನ್ ಸಿಬಿ ಕಚೇರಿಯಲ್ಲಿಯೇ ಇರಿಸಿಕೊಳ್ಳಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಇನ್ನು ವಿಚಾರಣೆಯ ವೇಳೆ ಭಾರ್ತಿ ಸಿಂಗ್ ಮತ್ತು ಆಕೆಯ ಪತಿ ಇಬ್ಬರೂ ಗಾಂಜಾ ಸೇವಿಸಿರುವುದಾಗಿ ಒಪ್ಪಿಕೊಂಡಿದ್ದು, ಬಳಿಕ ಅವರ ನಿವಾಸದ ಮೇಲೆ ದಾಳಿ ನಡೆಸಿದ ಸಂದರ್ಭದಲ್ಲಿ ಸ್ವಲ್ಪ ಪ್ರಮಾಣದ ಗಾಂಜಾವನ್ನು ಅಧಿಕಾರಿಗಳು ವಶಕ್ಕೆ ತೆಗೆದುಕೊಂಡಿದ್ದಾರೆ.