ಬೆಂಗಳೂರು, ನ.21 (DaijiworldNews/HR): ಕೊರೊನಾದ ನಡುವೆ ಇದೀಗ ರಾಜ್ಯಾದ್ಯಂತ ಪದವಿ ಮತ್ತು ಸ್ನಾತಕೋತ್ತರ ಪದವಿ ತರಗತಿಗಳು ಪುನಾರಂಭಗೊಂಡಿದ್ದು, ವಿದ್ಯಾರ್ಥಿಗಳು ಕಡ್ದಾಯಾವಾಗಿ ಕಾಲೇಜಿಗೆ ಬರಬೇಕೆಂಬ ಒತ್ತಾಯ ಇಲ್ಲ ಎಂದು ಉನ್ನತ ಶಿಕ್ಷಣ ಸಚಿವ ಹಾಗೂ ಡಿಸಿಎಂ ಅಶ್ವಥ್ ನಾರಾಯಣ್ ಹೇಳಿದ್ದಾರೆ.
ಈ ಕುರಿತು ಮಾತನಾಡಿದ ಅವರು, ಕೊರೊನಾ ಸುರಕ್ಷತಾ ಮಾರ್ಗಸೂಚಿಯೊಂದಿಗೆ ಕಾಲೇಜು ಆರಂಭವಾಗಿದೆ, ಕಾಲೇಜಿಗೆ ಕಡಿಮೆ ಸಂಖ್ಯೆಯಲ್ಲಿ ವಿದ್ಯಾರ್ಥಿಗಳು ಬರುತ್ತಿದ್ದಾರೆ, ಮುಂದಿನ ದಿನಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಬರಲಿದ್ದಾರೆ. ವಿದ್ಯಾರ್ಥಿಗಳು ಕಾಲೇಜಿಗೆ ಬರಬೇಕೆಂಬ ಒತ್ತಾಯ ಇಲ್ಲ, ಆಫ್ ಲೈನ್ ತರಗತಿಗೆ ಹಾಜರಾಗಲು ಸಾಧ್ಯವಾಗವದರಿಗೆ ಆನ್ ಲೈನ್ ಮೂಲಕ ತರಗತಿಗಳನ್ನು ನಡೆಸಲಾಗುವುದು ಎಂದರು.
ಇನ್ನು ಸರ್ಕಾರದ ಸೂಚನೆಯಂತೆ ಕಾಲೇಜಿಗೆ ಆಗಮಿಸುವ ವಿದ್ಯಾರ್ಥಿಗಳು ಮತ್ತು ಉಪನ್ಯಾಸಕರು ಕಾಲೇಜು ಸಿಬ್ಬಂದಿಗಳೆಲ್ಲರು ಕೂಡ ಕೊರೊನಾ ಟೆಸ್ಟ್ ಪ್ರಮಾಣ ಪತ್ರ ಕಡ್ಡಾಯಗೊಳಿಸಲಾಗಿದೆ ಎಂದು ಹೇಳಿದ್ದಾರೆ.