ಚಿತ್ತೂರು, ನ. 22 (DaijiworldNews/HR): ನವಂಬರ್ 24ರಂದು ರಾಷ್ಟ್ರಪತಿ ರಾಮ್ನಾಥ್ ಕೋವಿಂದ್, ಆಂಧ್ರಪ್ರದೇಶ ರಾಜ್ಯಪಾಲ ಬಿಸ್ವಭೂಷಣ್ ಹರಿಚಂದನ್ ಮತ್ತು ಮುಖ್ಯಮಂತ್ರಿ ಜಗನ್ಮೋಹನ್ ರೆಡ್ಡಿಯವರು ತಿರುಮಲ ದೇವಸ್ಥಾನಕ್ಕೆ ಭೇಟಿ ನೀಡಲಿದ್ದಾರೆ.
ನ. 24ರ ರಾಮ್ನಾಥ್ ಕೋವಿಂದ್ ಅವರ ಭೇಟಿಯ ಹಿನ್ನೆಲೆಯಲ್ಲಿ ವಿಮಾನ ನಿಲ್ದಾಣದಿಂದ ತಿರುಮಲ ದೇವಸ್ಥಾನದವರೆಗೆ ಭದ್ರತೆಯನ್ನು ಬಿಗಿಗೊಳಿಸಲಾಗುತ್ತಿದೆ್ ಎಂದು ತಿಳಿದು ಬಂದಿದೆ.
ಇನ್ನು ಕೋವಿಂದ್ ಅವರು ತಿರುಚನೂರು ಪದ್ಮಾವತಿ ಅಮ್ಮಾವರಿ ದೇವಸ್ಥಾನ, ತಿರುಮಲ ಪದ್ಮಾವತಿ ಅತಿಥಿಗೃಹ ಮತ್ತು ತಿರುಮಲ ಮುಖ್ಯ ದೇವಾಲಯಕ್ಕೆ ಭೇಟಿ ನೀಡಲಿದ್ದಾರೆ ಎಂದು ವರದಿಯಾಗಿದೆ.