ಕೋಲ್ಕತ್ತಾ,ನ. 22 (DaijiworldNews/HR): ನಾನು ರಾಜಕೀಯ ತೊರೆದು ಸಾಯಲು ಸಿದ್ಧ ಆದರೆ, ಬಿಜೆಪಿ ಪಕ್ಷಕ್ಕೆ ಎಂದಿಗೂ ಸೇರುವುದಿಲ್ಲ ಎಂದು ತೃಣಮೂಲ ಕಾಂಗ್ರೆಸ್ ಪಕ್ಷದ ಸಂಸದ ಸೌಗತ ರಾಯ್ ಹೇಳಿದ್ದಾರೆ.
ಪಶ್ಚಿಮ ಬಂಗಾಳದ ಐದು ತೃಣಮೂಲ ಕಾಂಗ್ರೆಸ್ ಸಂಸದರು ಪಕ್ಷಕ್ಕೆ ರಾಜಿನಾಮೆಕೊಟ್ಟು, ಬಿಜೆಪಿಗೆ ಬರಲಿದ್ದಾರೆ ಎಂಬ ಬಿಜೆಪಿ ನಾಯಕರ ಹೇಳಿಕೆ ಪ್ರತಿಕ್ರಿಯಿಸಿದ ಅವರು, ನಾನು ರಾಜಕೀಯ ತೊರೆದು ಸಾಯಲು ಸಿದ್ಧ ಹೊರತು ಬಿಜೆಪಿಗೆ ಸೇರುವುದಿಲ್ಲ ಅವರ ಜೊತೆ ಎಂದಿಗೂ ಕೈ ಜೋಡಿಸುವುದಿಲ್ಲ ಎಂದರು.
ಕೆಲ ದಿನಗಳ ಹಿಂದೆ ಬಿಜೆಪಿ ಸಂಸದ ಅರ್ಜುನ್ ಸಿಂಗ್ ಟಿಎಂಸಿ ಪಕ್ಷದ ಸಂಸದ ಸೌಗತ ರಾಯ್ ಸೇರಿದಂತೆ ದೊಡ್ಡ ನಾಯಕರೇ ಯಾವುದೇ ಕ್ಷಣದಲ್ಲಿ ಟಿಎಂಸಿಗೆ ರಾಜೀನಾಮೆ ನೀಡಿ ಬಿಜೆಪಿಗೆ ಬರಬಹುದೆಂದು ಮಾಧ್ಯಮಗಳಿಗೆ ತಿಳಿಸಿದ್ದರು.